• 7 ಫೆಬ್ರವರಿ 2025

ಮಹಾಕುಂಭ ಮೇಳದಲ್ಲಿ ಕಾಲ್ತುಳಿತ – ಹಲವು ಮಂದಿಗೆ ಗಂಭೀರ ಗಾಯ

 ಮಹಾಕುಂಭ ಮೇಳದಲ್ಲಿ ಕಾಲ್ತುಳಿತ – ಹಲವು ಮಂದಿಗೆ ಗಂಭೀರ ಗಾಯ
Digiqole Ad

ಮಹಾಕುಂಭ ಮೇಳದಲ್ಲಿ ಕಾಲ್ತುಳಿತ – ಹಲವು ಮಂದಿಗೆ ಗಂಭೀರ ಗಾಯ

ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಮಹಾಕುಂಭ ಮೇಳದಲ್ಲಿ ಇಂದು ಮೌನಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲು ಲಕ್ಷಾಂತರ ಮಂದಿ ಭಕ್ತರು ಆಗಮಿಸಿದ್ದು, ನೂಕುನುಗ್ಗಲು ಉಂಟಾಗಿತ್ತು.

ಈ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿ ಹಲವು ಮಂದಿ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಸುಮಾರು 25-30 ಮಹಿಳೆಯರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ನಂತರ, ಗಂಗಾದಲ್ಲಿ ಅಮೃತ ಸ್ನಾನ ಅಥವಾ ಸಾಮೂಹಿಕ ಪವಿತ್ರ ಸ್ನಾನದಲ್ಲಿ ವಿಳಂಬವಾಯಿತು. ಮೌನಿ ಅಮವಾಸ್ಯೆಯಂದು ಅಮೃತ ಸ್ನಾನವು ಮಹಾ ಕುಂಭದ ಅತ್ಯಂತ ಮಹತ್ವದ ಆಚರಣೆಯಾಗಿದೆ.ಆಂಬ್ಯುಲೆನ್ಸ್ ವಾಹನಗಳು ರಕ್ಷಣಾ ಕಾರ್ಯಾಚರಣೆಗಾಗಿ ಸ್ಥಳಕ್ಕೆ ತಲುಪಿವೆ. 10 ಕೋಟಿಗೂ ಹೆಚ್ಚು ಭಕ್ತರು ಆಗಮಿಸುವ ನಿರೀಕ್ಷೆ ಇದೆ.

Digiqole Ad

ಈ ಸುದ್ದಿಗಳನ್ನೂ ಓದಿ