ಅಗ್ನಿವೀರ್ ಹುದ್ದೆಗಳ ನೇಮಕಾತಿ: ಅರ್ಜಿ ಸಲ್ಲಿಕೆಗೆ ದಿನಾಂಕ ವಿಸ್ತರಣೆ, ಫೆ.2ರ ವರೆಗೆ ಅವಕಾಶ
ಅಗ್ನಿವೀರ್ ಹುದ್ದೆಗಳ ನೇಮಕಾತಿ: ಅರ್ಜಿ ಸಲ್ಲಿಕೆಗೆ ದಿನಾಂಕ ವಿಸ್ತರಣೆ, ಫೆ.2ರ ವರೆಗೆ ಅವಕಾಶ
ಭಾರತೀಯ ವಾಯುಪಡೆ ಇಲಾಖೆ ಇತ್ತೀಚೆಗೆ ಅಗ್ನಿವೀರ್ ಹುದ್ದೆಗಳನ್ನು ಭರ್ತಿ ಮಾಡುವ ಸಂಬಂಧ ಅಧಿಸೂಚನೆ ಹೊರಡಿಸಿತ್ತು. ಅರ್ಜಿಯ ಕೊನೆಯ ದಿನಾಂಕ ಕೂಡ ಮುಕ್ತಾಯವಾಗಿತ್ತು. ಆದರೆ ಇದೀಗ ಭಾರತೀಯ ವಾಯುಪಡೆಯು ಈ ದಿನಾಂಕವನ್ನು ವಿಸ್ತರಣೆ ಮಾಡಿದೆ, ಈ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಶುಭ ಸುದ್ದಿ ನೀಡಿದೆ. ಇದೀಗ ಅರ್ಜಿ ಸಲ್ಲಿಕೆಗೆ ಫೆಬ್ರವರಿ 2ರ ತನಕ ಅವಕಾಶ ನೀಡಲಾಗಿದೆ. ಅಭ್ಯರ್ಥಿಗಳು ವಾಯುಪಡೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಬೇರೆ ಮೂಲದಿಂದ ಬರುವ ಅರ್ಜಿಗಳನ್ನು ಇಲಾಖೆ ಸ್ವೀಕಾರ ಮಾಡುವುದಿಲ್ಲ ಎಂದು ತಿಳಿಸಿದೆ.