ಭಾರತ ರತ್ನ ಸಚಿನ್ ತೆಂಡೂಲ್ಕರ್ ಗೆ ಜೀವಮಾನ ಸಾಧನೆ ಪ್ರಶಸ್ತಿ ಘೋಷಿಸಿದ ಬಿಸಿಸಿಐ
ಭಾರತ ರತ್ನ ಸಚಿನ್ ತೆಂಡೂಲ್ಕರ್ ಗೆ ಜೀವಮಾನ ಸಾಧನೆ ಪ್ರಶಸ್ತಿ ಘೋಷಿಸಿದ ಬಿಸಿಸಿಐ
ಕ್ರಿಕೆಟ್ ಕ್ಷೇತ್ರದಲ್ಲಿನ ಸಾಧನೆಯನ್ನು ಪರಿಗಣಿಸಿ, ಬಿಸಿಸಿಐ ಕರ್ನಲ್ ಸಿ.ಕೆ. ನಾಯ್ಡು ಜೀವಮಾನ ಸಾಧನೆ ಪ್ರಶಸ್ತಿಯನ್ನು ಕ್ರಿಕೆಟ್ ಮಾಂತ್ರಿಕ, ಭಾರತ ರತ್ನ ಪುರಸ್ಕೃತ ಸಚಿನ್ ತೆಂಡೂಲ್ಕರ್ ಅವರಿಗೆ ಪ್ರಶಸ್ತಿ ನೀಡುವುದಾಗಿ ಘೋಷಿಸಿದೆ. ನಾಳೆ (ಫೆ.1)ನಡೆಯುವ ಬಿಸಿಸಿಐ ವಾರ್ಷಿಕ ಪ್ರಶಸ್ತಿ ಸಮಾರಂಭದಲ್ಲಿ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಲಾಗುವುದು ಎಂದು ವರದಿಯಾಗಿದೆ.
ಭಾರತದ ಪರ 664 ಅಂತರ್ ರಾಷ್ಟ್ರೀಯ ಪಂದ್ಯಗಳನ್ನು ಆಡಿರುವ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿ ಟೆಸ್ಟ್,ಏಕದಿನ ಕ್ರಿಕೆಟ್ ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆ ಇದೆ. ಸಚಿನ್ ತೆಂಡೂಲ್ಕರ್ ಅವರು ಇದುವರೆಗೆ ಭಾರತ ರತ್ನ ಸೇರಿದಂತೆ ಹಲವು ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದ್ದಾರೆ.