ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ, ಕರ್ನಾಟಕದ ವಿವಿಧೆಡೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ, ಕರ್ನಾಟಕದ ವಿವಿಧೆಡೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರತ ಕುಸಿತ ಉಂಟಾಗಿದ್ದು, ಕರ್ನಾಟಕದ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕ
ರಾಜ್ಯಾದ್ಯಂತ ಚಳಿಯ ಪ್ರಮಾಣವು ಕ್ರಮೇಣ ಕಡಿಮೆಯಾಗುತ್ತಿದೆ.
ದಾವಣಗೆರೆಯಲ್ಲಿ 11.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ನಾಳೆಯಿಂದ ಕೆಲವೆಡೆ ಮಳೆ ಆಗುವ ನಿರೀಕ್ಷೆ ಇದೆ.
ವಿಜಯನಗರ, ರಾಮನಗರ, ಮೈಸೂರು, ತುಮಕೂರು, ಶಿವಮೊಗ್ಗ, ಮಂಡ್ಯ,ಕೋಲಾರ, ದಾವಣಗೆರೆ,ಹಾಸನ,ಕೊಡಗು, ಚಿಕ್ಕಮಗಳೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ ಈ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.