ದಿಢೀರ್ ಅನಾರೋಗ್ಯ: ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು
ದಿಢೀರ್ ಅನಾರೋಗ್ಯ: ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದಿಢೀರ್ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲು ಆಗಿದ್ದಾರೆ ಎಂದು ತಿಳಿದುಬಂದಿದೆ.
ಸಿಎಂ ಸಿದ್ದರಾಮಯ್ಯ ಅವರಿಗೆ ಇದ್ದಕ್ಕಿದ್ದಂತೆ ಮಂಡಿನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ತೆರಳಿ ಪ್ರಾಥಮಿಕ ತಪಾಸಣೆ ನಡೆಸಿ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಅವರ ಇಂದಿನ ಎಲ್ಲಾ ಕಾರ್ಯಕ್ರಮಗಳು ರದ್ದಾಗಿವೆ.
ಎರಡು ದಿನ ವಿಶ್ರಾಂತಿಗೆ ವೈದ್ಯರ ಸೂಚನೆ
ಸಿದ್ದರಾಮಯ್ಯನವರ ಎಡಗಾಲಿನ ಮಂಡಿ ನೋವು ಹೆಚ್ಚಾಗಿದೆ. ಹೀಗಾಗಿ ಮಣಿಪಾಲ್ ಆಸ್ಪತ್ರೆಯ ಡಾ. ಸತ್ಯನಾರಾಯಣ ಅವರು ಸಿಎಂ ಸಿದ್ದರಾಮಯ್ಯರನ್ನು ತಪಾಸಣೆ ನಡೆಸಿದ್ದಾರೆ. ಸಿದ್ದರಾಮಯ್ಯ ಹಿಂದೆ ಲೆಗಮೆಂಟ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಅದೇ ಜಾಗದಲ್ಲಿ ಮತ್ತೆ ನೋವು ಕಾಣಿಸಿಕೊಂಡಿದೆ. ಉಳಿದಂತೆ ಯಾವುದೇ ಸಮಸ್ಯೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ. 2 ದಿನ ಪ್ರಯಾಣ ಮಾಡದೆ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ.