ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ ಹಾಕಲು ಮುಂದಾದ ಸರಕಾರ
ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ ಹಾಕಲು ಮುಂದಾದ ಸರಕಾರ
ಬೆಂಗಳೂರು: ಮೈಕ್ರೋ ಫೈನಾನ್ಸ್ ಗಳ ಕಿರುಕುಳಕ್ಕೆ ಕಡಿವಾಣ ಹಾಕಲು ಸರಕಾರ ಮುಂದಾಗಿದೆ.
ಹೊಸ ಕಾನೂನು ಜಾರಿಗೆ ತರಲು ಸರಕಾರ ಮುಂದಾಗಿದ್ದು, ಈ ನಿಟ್ಟಿನಲ್ಲಿ ಸಚಿವ ಹೆಚ್.ಕೆ. ಪಾಟೀಲ್ ಮತ್ತು ಕೃಷ್ಣ ಬೈರೇಗೌಡ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈ ವೇಳೆ ಸಚಿವರು, ಸಾಮರ್ಥ್ಯಕ್ಕಿಂತ ಅಧಿಕ ಸಾಲ ನೀಡುವ ಮೂಲಕ ಬಡವರನ್ನು ಸಾಲದ ಸುಳಿಗೆ ಸಿಲುಕಿಸುತ್ತಿರುವ ಹುನ್ನಾರವನ್ನು ತಡೆಯಲು ಆನ್ಲೈನ್ ಪೋರ್ಟಲ್ ಮಾಡಿ, ಯಾರಿಗೆ ಎಷ್ಟು ಸಾಲ ನೀಡಲಾಗಿದೆ ಎಂದು ಅಪ್ಡೇಟ್ ಮಾಡಬೇಕು, ಸಾಲಕ್ಕಾಗಿ ಅರ್ಜಿ ಸಲ್ಲಿಕೆ, ಸಾಲ ನೀಡುವ ಸಂಪೂರ್ಣ ಪ್ರಕ್ರಿಯೆಯನ್ನು ಆನ್ಲೈನ್ ಮೂಲಕವೇ ನಿಭಾಯಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.