ಮಹಾಕುಂಭಮೇಳದಲ್ಲಿ ಇಂದು ಬೆಳ್ಳಂಬೆಳಗ್ಗೆ 62 ಲಕ್ಷಕ್ಕೂ ಹೆಚ್ಚು ಭಕ್ತರಿಂದ ಅಮೃತಸ್ನಾನ:
ಮಹಾಕುಂಭಮೇಳದಲ್ಲಿ ಇಂದು ಬೆಳ್ಳಂಬೆಳಗ್ಗೆ 62 ಲಕ್ಷಕ್ಕೂ ಹೆಚ್ಚು ಭಕ್ತರಿಂದ ಅಮೃತಸ್ನಾನ
ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ದಿನದಿಂದ ದಿನಕ್ಕೆ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂದು ಬಸಂತ ಪಂಚಮಿಯ ಅಮೃತಸ್ನಾನದ ಹಿನ್ನೆಲೆಯಲ್ಲಿ ತ್ರಿವೇಣಿ ಸಂಗಮದಲ್ಲಿ ಇಂದು ಮುಂಜಾನೆ 8 ಗಂಟೆಯೊಳಗೆ 62 ಲಕ್ಷಕ್ಕೂ ಹೆಚ್ಚು ಭಕ್ತರು ಪವಿತ್ರ ಸ್ಥಾನ ಮಾಡಿದ್ದಾರೆ ಎಂದು ವರದಿಯಾಗಿದೆ.
ಉತ್ತರ ಪ್ರದೇಶದ ಮಾಹಿತಿ ಇಲಾಖೆಯ ಪ್ರಕಾರ, ಜನವರಿ 13ರಂದು ಮಹಾಕುಂಭಮೇಳ ಪ್ರಾರಂಭವಾದಾಗಿನಿಂದ ಇಂದಿನವರೆಗೆ 349.7 ಮಿಲಿಯನ್ ಗಿಂತಲೂ ಹೆಚ್ಚು (34.97 ಕೋಟಿ ) ಭಕ್ತರು ಪವಿತ್ರ ಸ್ನಾನದಲ್ಲಿ ಭಾಗವಹಿಸಿದ್ದಾರೆ.