ಮಹಿಳಾ ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ 5 ಕೋಟಿ ರೂ. ಬಹುಮಾನ ಘೋಷಿಸಿದ ಬಿಸಿಸಿಐ
ಮಹಿಳಾ ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ 5 ಕೋಟಿ ರೂ. ಬಹುಮಾನ ಘೋಷಿಸಿದ ಬಿಸಿಸಿಐ
ಭಾರತ ತಂಡವು ಅಂಡರ್-19 ಮಹಿಳಾ ಟಿ20 ವಿಶ್ವಕಪ್ ಗೆಲ್ಲುತ್ತಿರುವುದು ಇದು ಎರಡನೇ ಬಾರಿ, ಇದೀಗ ಅಂಡರ್-19 ಮಹಿಳಾ ಟಿ20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ಬಿಸಿಸಿಐ 5 ಕೋಟಿ ರೂಪಾಯಿ ಬಹುಮಾನ ಘೋಷಿಸಿದೆ.
ಈ ನಗದು ಬಹುಮಾನವನ್ನು ಆಟಗಾರರು ಮತ್ತು ಸಿಬ್ಬಂದಿಗಳು ಹಂಚಿಕೊಳ್ಳಲಿದ್ದಾರೆ.
ಕೌಲಾಲಂಪುರದ ಬೇಯುಮಾಸ್ ಓವಲ್ ಸ್ಟೇಡಿಯಂನಲ್ಲಿ ನಡೆದ ಅಂಡರ್-19 ಮಹಿಳಾ ಟಿ20 ವಿಶ್ವಕಪ್ ನ ಫೈನಲ್ ಪಂದ್ಯದಲ್ಲಿ ಭಾರತ ತಂಡವು ಸೌತ್ ಆಫ್ರಿಕಾ ತಂಡವನ್ನು ಮಣಿಸಿ ಎರಡನೇ ಬಾರಿ ವಿಶ್ವ ಕಿರೀಟವನ್ನು ಮುಡಿಗೇರಿಸಿಕೊಂಡಿದೆ.