ಚಿಕ್ಕಮಗಳೂರು: 7 ಜನರಲ್ಲಿ ಕಾಣಿಸಿಕೊಂಡ ಮಂಗನ ಕಾಯಿಲೆ
ಚಿಕ್ಕಮಗಳೂರು: 7 ಜನರಲ್ಲಿ ಕಾಣಿಸಿಕೊಂಡ ಮಂಗನ ಕಾಯಿಲೆ
ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಟ್ಟು 7 ಜನರಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಿದ್ದು, ಆತಂಕ ಸೃಷ್ಟಿ ಮಾಡಿದೆ.
NR ಪುರ ಗ್ರಾಮದ ಮೇಲ್ಪಾಲ್ ಗ್ರಾಮದಲ್ಲೇ 3 ಜನರಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಿದೆ. ಕೊಪ್ಪ ಸರಕಾರಿ ಆಸ್ಪತ್ರೆಯಲ್ಲಿ ಕೆ ಎಫ್ ಡಿ ವಾರ್ಡ್ ತೆರೆಯಲಾಗಿದೆ. ಕಳೆದ ವರ್ಷ ಚಿಕ್ಕಮಗಳೂರು ಜಿಲ್ಲೆಯಲ್ಲಿ 132 ಜನರಲ್ಲಿ ಈ ಕಾಯಿಲೆ ಕಾಣಿಸಿಕೊಂಡಿದ್ದು, ಅದರಲ್ಲಿ ನಾಲ್ವರು ಮೃತಪಟ್ಟಿದ್ದರು. ಮಂಗನ ಕಾಯಿಲೆ ಪತ್ತೆಯಾಗಿರುವ ಇಲ್ಲಿನ ಕೆಲವು ಗ್ರಾಮಗಳಲ್ಲಿ ಮಂಗಗಳು ಸಾವನ್ನಪ್ಪಿರುವ ಬಗ್ಗೆ ಮಾಹಿತಿ ಸಂಗ್ರಹ ಮಾಡಲಾಗಿದೆ.