ಗಾಯಕ್ಕೆ ಹೊಲಿಗೆ ಹಾಕುವ ಬದಲು ಫೆವಿಕ್ವಿಕ್ ಹಾಕಿದ ನರ್ಸ್ ಕಾರಣ ಕೇಳಿ ಶಾಕ್!
ಗಾಯಕ್ಕೆ ಹೊಲಿಗೆ ಹಾಕುವ ಬದಲು ಫೆವಿಕ್ವಿಕ್ ಹಾಕಿದ ನರ್ಸ್ ಕಾರಣ ಕೇಳಿ ಶಾಕ್!
ಹಾವೇರಿ : ಪುಟ್ಟ ಬಾಲಕನ ಕೆನ್ನೆಗಾದ ಗಾಯಕ್ಕೆ ಸ್ವಿಚ್ ಹಾಕುವ ಬದಲು ನರ್ಸ್ ಒಬ್ಬಳು ತನ್ನ ಬುದ್ಧಿವಂತಿಕೆಯಿಂದ ಫೆವಿಕ್ವಿಕ್ ಹಾಕಿರುವ ಘಟನೆ ಹಾವೇರಿಯ ಗ್ರಾಮದಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಆಡೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಘಟನೆ ನಡೆದಿದೆ. ಕಳೆದ ಜನವರಿ 14ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದ್ದು
7 ವರ್ಷದ ಗುರುಕಿಶನ್ ಅಣ್ಣಪ್ಪ ಹೊಸಮನಿ ಎಂಬ ಬಾಲಕನಿಗೆ ಕೆನ್ನೆ ಮೇಲೆ ಗಾಯ ಆಗಿತ್ತು. ಆಟ ಆಡುವಾಗ ಗುರುಕಿಶನ್ ಕೆನ್ನೆಗೆ ಗಾಯ ಮಾಡಿಕೊಂಡಿದ್ದ. ಕೆನ್ನೆಯ ಮೇಲಿನ ಗಾಯ ಬಹಳ ಆಳಕ್ಕೆ ಇಳಿದಿದ್ದರಿಂದ ರಕ್ತ ಕೂಡ ಸುರಿಯುತ್ತಿತ್ತು. ಕೂಡಲೇ ಬಾಲಕ ಗುರುಕಿಶನ್ ನನ್ನು ಆಡೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕುಟುಂಬಸ್ಥರು ಕರೆದೊಯ್ದಿದ್ದರು. ಗಾಯಕ್ಕೆ ಹೊಲಿಗೆ ಹಾಕೋದು ಬಿಟ್ಟ ನರ್ಸ್ ಜ್ಯೋತಿ ಎನ್ನುವವರು ಫೆವಿಕ್ವಿಕ್ ಗಮ್ ಅಂಟಿಸಿ ಚಿಕಿತ್ಸೆ ನೀಡಿದ್ದರು.
ಬಾಲಕನಿಗೆ ಫೆವಿಕ್ವಿಕ್ ಯಾಕೆ ಹಾಕಿದ್ರಿ ಅಂತ ಕೇಳಿದರೆ ಸ್ತೀಚೆಸ್ ಹಾಕಿದರೆ ಬಾಲಕನ ಕೆನ್ನೆ ಮೇಲೆ ಕಲೆ ಆಗುತ್ತಿತ್ತು. ಹೀಗಾಗಿ ಭವಿಷ್ಯದ ಕಲೆ ತಪ್ಪಿಸಲು ಚರ್ಮದ ಮೇಲೆ ಫೆವಿಕ್ವಿಕ್ ಹಾಕಿ ಚಿಕಿತ್ಸೆ ನೀಡಿದ್ದೇನೆ ಎಂದು ನರ್ಸ್ ಜ್ಯೋತಿ ತನ್ನ ಬುದ್ಧಿ ಮತ್ತೆಯನ್ನು ಸಮರ್ಥಿಸಿಕೊಂಡಿದ್ದಾಳೆ.
ಈ ಬಗ್ಗೆ ಆಡೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಗೆ ಬಾಲಕನ ಪೋಷಕರು ದೂರು ನೀಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ವರದಿ ಪಡೆದು ಕ್ರಮ ಜರುಗಿಸಲು ಡಿ.ಹೆಚ್ ಒ ರಾಜೇಶ್ ಸುರಗಿಹಳ್ಳಿ ಮುಂದಾಗಿದ್ದಾರೆ.
ಹಾವೇರಿ ತಾಲೂಕು ಗುತ್ತಲ ಆರೋಗ್ಯ ಸಂಸ್ಥೆಗೆ ನಿಯೋಜನೆ ಮಾಡಲು ಡಿಹೆಚ್.ಒ ಆದೇಶ ಮಾಡಿದ್ದಾರೆ. ಫೆವಿಕ್ವಿಕ್ ಹಾಕಿ ನಿರ್ಲಕ್ಷ್ಯ ತೋರಿದರೂ ನರ್ಸ್ ಜ್ಯೋತಿ ಅಮಾನತು ಮಾಡಲು ಡಿಹೆಚ್ ಒ ಹಿಂದೇಟು ಹಾಕಿದ್ದಾರೆ ಎನ್ನಲಾಗಿದೆ.