ಸರಕಾರಿ ಕಚೇರಿ ಮತ್ತು ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ಬಾಟಲ್ ನೀರು ನಿಷೇಧ: ಕರ್ನಾಟಕ ಸರಕಾರ
ಸರಕಾರಿ ಕಚೇರಿ ಮತ್ತು ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ಬಾಟಲ್ ನೀರು ನಿಷೇಧ: ಕರ್ನಾಟಕ ಸರಕಾರ
ಸರಕಾರಿ ಕಚೇರಿಗಳಲ್ಲಿ ಮತ್ತು ಸರಕಾರಿ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ಪರಿಸರದ ಮೇಲೆ ಪ್ಲಾಸ್ಟಿಕ್ ಬಳಕೆಯಿಂದ ಆಗುವ ಗಂಭೀರ ಹಾನಿಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಸರಕಾರ ಮಹತ್ವದ ಆದೇಶ ಹೊರಡಿಸಿದೆ.
ಪ್ಲಾಸ್ಟಿಕ್ ವಸ್ತುಗಳ ಅತಿಯಾದ ಬಳಕೆಯಿಂದ ಆರೋಗ್ಯ ಮತ್ತು ಪರಿಸರದ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮಗಳನ್ನು ತಡೆಯುವ ದೃಷ್ಟಿಯಿಂದ ಸಚಿವಾಲಯ ಸೇರಿದಂತೆ ರಾಜ್ಯಾದ್ಯಂತ ಎಲ್ಲಾ ಸರಕಾರಿ ಕಚೇರಿಗಳಲ್ಲಿ ಮತ್ತು ಸರಕಾರಿ ಸೌಮ್ಯದ ಮಂಡಳಿ,ನಿಗಮ, ವಿವಿಗಳು ಮತ್ತು ಸರಕಾರದಿಂದ ಅನುದಾನ ಪಡೆಯುವಂತಹ ಯಾವುದೇ ಸಂಸ್ಥೆಗಳ ವತಿಯಿಂದ ಏರ್ಪಡಿಸಲ್ಪಡುವ ಸಭೆ ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲ್ ನೀರಿನ ಬಳಕೆ ನಿಷೇಧಿಸಲಾಗಿದೆ.