ಫೆ.7 ರಂದು ‘ಕೊಡವಾಮೆ ಬಾಳೋ’ ಪಾದಯಾತ್ರೆ ದಕ್ಷಿಣ ಕೊಡಗಿನ 5 ಶಾಲಾ ಕಾಲೇಜಿಗೆ ರಜೆ ಘೋಷಣೆ
ಫೆ.7 ರಂದು ‘ಕೊಡವಾಮೆ ಬಾಳೋ’ ಪಾದಯಾತ್ರೆ
ದಕ್ಷಿಣ ಕೊಡಗಿನ 5 ಶಾಲಾ ಕಾಲೇಜಿಗೆ ರಜೆ ಘೋಷಣೆ
ಕೊಡಗು: ಕೊಡವರ ಸಂಸ್ಕೃತಿ ಉಳಿವಿಗಾಗಿ ಕೊಡಗಿನಲ್ಲಿ ನಡೆಯುಲಿರುವ ‘ಕೊಡವಾಮೆ ಬಾಳೋ’ ಪಾದಯಾತ್ರೆಗೆ ಬೆಂಬಲಿಸಿ ಫೆಬ್ರವರಿ 7ರಂದು ದಕ್ಷಿಣ ಕೊಡಗಿನ 5 ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಕೊಡವ ಆಡಳಿತ ಮಂಡಳಿಯಲ್ಲಿರುವ ಶಾಲಾ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು ಮತ್ತು ಶಿಕ್ಷಕರು ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ರಜೆ ನೀಡಬೇಕೆಂದು ಆ ಶಾಲೆಯ ಮಕ್ಕಳ ಪೋಷಕರು ಆಡಳಿತ ಮಂಡಳಿಗೆ ಮನವಿ ಮಾಡಿದ್ದರು. ಈ ಮನವಿಗೆ ಮಾನ್ಯತೆ ನೀಡಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ರಜೆ ಘೋಷಣೆ ಮಾಡಿದೆ.