ಕಡಬ ತಾಲೂಕು ಪಂಚಾಯತ್‌ಗೆ ನರೇಗಾ ರಾಜ್ಯ ಪ್ರಶಸ್ತಿ
ಕಡಬ ತಾಲೂಕು ಪಂಚಾಯತ್‌ಗೆ ನರೇಗಾ ರಾಜ್ಯ ಪ್ರಶಸ್ತಿ
ಪುತ್ತೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ (ನರೇಗಾ) 2023-24ನೇ ಸಾಲಿನ ಅತ್ಯುತ್ತಮ ಅನುಷ್ಠಾನಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕು ಪಂಚಾಯತ್‌ಗೆ ನರೇಗಾ ರಾಜ್ಯ ಪ್ರಶಸ್ತಿ ಲಭಿಸಿದೆ.
ಈ ಪ್ರಶಸ್ತಿ ಪ್ರದಾನ ಸಮಾರಂಭವು ಫೆಬ್ರವರಿ 5ರಂದು ಬೆಂಗಳೂರಿನ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕಡಬ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಕುಮಾರ್ ಭಂಡಾರಿ, ಸಹಾಯಕ ನಿರ್ದೇಶಕರಾದ ಚೆನ್ನಪ್ಪ ಗೌಡ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ್ ಪ್ರಶಸ್ತಿಯನ್ನು ಸ್ವೀಕರಿಸಿದರು.
ಪ್ರಶಸ್ತಿಯನ್ನು ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ, ಶಾಸಕರಾದ ರಿಜ್ವಾನ್ ಅರ್ಷದ್, ಶರತ್ ಬಚ್ಚೇಗೌಡ, ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಅಂಜುಮನ್ ಪರ್ವೇಜ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹದೇವನ್ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಯ ಆಯುಕ್ತ ಪವನ್ ಕುಮಾರ್ ಮಾಲಪಾಟಿ ನೀಡಿದರು.
ನರೇಗಾ ಯೋಜನೆಯ ಪರಿಣಾಮಕಾರಿ ಅನುಷ್ಠಾನದ ಮೂಲಕ ಗ್ರಾಮೀಣ ಅಭಿವೃದ್ಧಿಗೆ ಕಡಬ ತಾಲೂಕು ಪಂಚಾಯತ್ ಮಹತ್ವದ ಕೊಡುಗೆ ನೀಡಿದ್ದು, ಈ ಸಾಧನೆಗೆ ಅನೇಕ ಕ್ಷೇತ್ರಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಏನಿದು ನರೇಗಾ?
ನರೇಗಾ ಪ್ರಶಸ್ತಿ ಎಂಬುದು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (MGNREGA) ಯಡಿ ಉತ್ತಮ ಕಾರ್ಯನಿರ್ವಹಣೆ ಮಾಡಿದ ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್, ಮತ್ತು ಜಿಲ್ಲಾ ಪಂಚಾಯತ್‌ಗಳಿಗೆ ನೀಡುವ ರಾಜ್ಯ ಮಟ್ಟದ ಗೌರವ ಪ್ರಶಸ್ತಿಯಾಗಿದೆ.
*ನರೇಗಾ ಪ್ರಶಸ್ತಿಯ ಉದ್ದೇಶ:*
ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಪರಿಣಾಮಕಾರಿ ಅನುಷ್ಠಾನ ಆರ್ಥಿಕ ಸಮೃದ್ಧಿ ಮತ್ತು ಗ್ರಾಮೀಣ ಅಭಿವೃದ್ಧಿಗೆ ಸಹಕಾರ ಪರಿಸರ ಸಂರಕ್ಷಣೆ, ಜಲಸಂರಕ್ಷಣೆ, ಮತ್ತು ಸಸ್ಥಾಯಿತ್ವ ಕಾಪಾಡಲು ಮಾಡಿರುವ ಉತ್ತಮ ಕಾಯಕ ಈ ಪ್ರಶಸ್ತಿಯನ್ನು ಕರ್ನಾಟಕ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನೀಡುತ್ತದೆ. ಪ್ರಶಸ್ತಿ ಫಲಿತಾಂಶವು ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಿದ ಪ್ರಾಧಿಕಾರಗಳ ಕಾರ್ಯನೈಪುಣ್ಯಕ್ಕೆ ನೀಡುವ ಮಾನ್ಯತೆಯಾಗಿದೆ.