ಮಹಾಕುಂಭಮೇಳ: ಇಲ್ಲಿಯವರೆಗೆ 42 ಕೋಟಿಗೂ ಹೆಚ್ಚು ಭಕ್ತರಿಂದ ಪವಿತ್ರ ಸ್ನಾನ
ಮಹಾಕುಂಭಮೇಳ: ಇಲ್ಲಿಯವರೆಗೆ 42 ಕೋಟಿಗೂ ಹೆಚ್ಚು ಭಕ್ತರಿಂದ ಪವಿತ್ರ ಸ್ನಾನ
ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಇಲ್ಲಿಯವರೆಗೆ 42 ಕೋಟಿಗೂ ಹೆಚ್ಚು ಭಕ್ತರು ಪವಿತ್ರ ಸ್ನಾನ ಮಾಡಿದ್ದಾರೆ.
ಜನವರಿ 13 ರಿಂದ ಇಲ್ಲಿಯವರೆಗೆ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ ಭಕ್ತರ ಸಂಖ್ಯೆ 42 ಕೋಟಿಗೂ ದಾಟಿದೆ ಎಂದು ಮಾಹಿತಿ ತಿಳಿದು ಬಂದಿದೆ. ಮಹಾಕುಂಭಮೇಳಕ್ಕೆ ಇನ್ನೂ 19 ದಿನಗಳು ಬಾಕಿ ಇವೆ. ಸಂಗಮದಲ್ಲಿ ಇನ್ನೂ ಕನಿಷ್ಠ 10 ಕೋಟಿ ಭಕ್ತರು ಪವಿತ್ರ ಸ್ನಾನ ಮಾಡುವ ನಿರೀಕ್ಷೆ ಇದೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಫೆ.10 ರಂದು ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಲಿದ್ದಾರೆ.