ಫೆ.10 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ತ್ರಿವೇಣಿಯಲ್ಲಿ ಪುಣ್ಯ ಸ್ನಾನ
ಫೆ.10 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ತ್ರಿವೇಣಿಯಲ್ಲಿ ಪುಣ್ಯ ಸ್ನಾನ
ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಫೆ. 10 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾಗಿಯಾಗಲಿದ್ದಾರೆ. ಅಂದು ಅವರು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲಿದ್ದಾರೆ. ಇಲ್ಲಿಯವರೆಗೆ 42 ಕೋಟಿಗೂ ಹೆಚ್ಚು ಭಕ್ತರು ಪವಿತ್ರ ಸ್ನಾನ ಮಾಡಿದ್ದಾರೆ.
ಮಹಾಕುಂಭ ಮೇಳಕ್ಕೆ ಇನ್ನೂ 19 ದಿನಗಳು ಬಾಕಿ ಇದೆ. ಈ ಮಹಾಕುಂಭ ಮೇಳದಲ್ಲಿ ಒಟ್ಟು ಭಕ್ತರ ಸಂಖ್ಯೆ 50 ಕೋಟಿ ದಾಟುವ ನಿರೀಕ್ಷೆ ಇದೆ. ಜನವರಿ 29 ಮೌನಿ ಅಮಾವಾಸ್ಯೆಯಂದು ಎಂಟು ಕೋಟಿಗೂ ಹೆಚ್ಚು ಭಕ್ತರು ಪವಿತ್ರ ಸ್ನಾನ ಮಾಡಿದ್ದಾರೆ.