• 19 ಮಾರ್ಚ್ 2025

ತಿರುಪತಿ ಲಡ್ಡು ಪ್ರಸಾದದಲ್ಲಿ ಕಲಬೆರಕೆ ಪ್ರಕರಣ: ನಾಲ್ವರನ್ನು ಬಂಧಿಸಿದ ಸಿಬಿಐ

 ತಿರುಪತಿ ಲಡ್ಡು ಪ್ರಸಾದದಲ್ಲಿ ಕಲಬೆರಕೆ ಪ್ರಕರಣ: ನಾಲ್ವರನ್ನು ಬಂಧಿಸಿದ ಸಿಬಿಐ
Digiqole Ad

ತಿರುಪತಿ ಲಡ್ಡು ಪ್ರಸಾದದಲ್ಲಿ ಕಲಬೆರಕೆ ಪ್ರಕರಣ: ನಾಲ್ವರನ್ನು ಬಂಧಿಸಿದ ಸಿಬಿಐ

ಹೈದರಾಬಾದ್: ತಿರುಪತಿ ತಿಮ್ಮಪ್ಪನ ದೇಗುಲದ ಲಡ್ಡು ಪ್ರಸಾದದಲ್ಲಿ ಕಲಬೆರಕೆ ವಿವಾದಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ನಾಲ್ವರನ್ನು ಬಂಧಿಸಿದ್ದಾರೆ. ನಿಯಮ ಉಲ್ಲಂಘಿಸಿದ ಆರೋಪದಡಿ ನಾಲ್ವರನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ತಿರುಪತಿ ನ್ಯಾಯಾಲಯದ ಎದುರು ಹಾಜರಿಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

 ಉತ್ತರಾಖಂಡದ ರೂರ್ಕಿಯ ಭೋಲೆ ಬಾಬಾ ಡೈರಿಯ ಮಾಜಿ ನಿರ್ದೇಶಕ ವಿಪಿನ್ ಜೈನ್,ಪೊಮಿಲ್ ಜೈನ್, ಪೂನಂಬಾಕ್ಕಂನ ವೈಷ್ಣವಿ ಡೈರಿ ಸಿಇಒ ಅಪೂರ್ವ ವಿನಯ್ ಕಾಂತ್ ಚಾವ್ಡಾ,ದುಂಡಿಗಲ್ ನ ಎಆರ್ ಡೈರಿ ಎಂಡಿ ರಾಜಶೇಖರನ್ ಬಂಧಿತ ಆರೋಪಿಗಳು. ಆರೋಪಿಗಳು ತುಪ್ಪ ಪೂರೈಕೆಯ ನೆಪದಲ್ಲಿ ಅನೇಕ ನಿಯಮಗಳನ್ನು ಉಲ್ಲಂಘನೆ ಮಾಡಿರುವುದು ದೃಢವಾಗಿದೆ.

Digiqole Ad

ಈ ಸುದ್ದಿಗಳನ್ನೂ ಓದಿ