‘ಜಾನಪದ ಕೋಗಿಲೆ’ ಪದ್ಮಶ್ರೀ ಪುರಸ್ಕೃತೆ ಸುಕ್ರಜ್ಜಿ ಇನ್ನಿಲ್ಲ
‘ಜಾನಪದ ಕೋಗಿಲೆ’ ಪದ್ಮಶ್ರೀ ಪುರಸ್ಕೃತೆ ಸುಕ್ರಜ್ಜಿ ಇನ್ನಿಲ್ಲ
ಅಂಕೋಲಾ: ಪದ್ಮಶ್ರೀ ಪುರಸ್ಕೃತೆ ಸುಕ್ರಜ್ಜಿ ಎಂದೇ ಖ್ಯಾತಿ ಪಡೆದಿದ್ದ ಸುಕ್ರಿ ಬೊಮ್ಮ ಗೌಡ(88) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬಡಿಗೇರಿ ಗ್ರಾಮದ ನಿವಾಸಿಯಾದ ಸುಕ್ರಿ ಬೊಮ್ಮ ಗೌಡ ಹಾಲಕ್ಕಿ ಒಕ್ಕಲಿಗ ಬುಡಕಟ್ಟು ಜನಾಂಗದಲ್ಲಿ ಜನಿಸಿದ್ದರು. ಅವರನ್ನು ‘ಜಾನಪದ ಕೋಗಿಲೆ’ ಎಂದೇ ಕರೆಯಲಾಗುತ್ತಿತ್ತು. ಅವರ ಅದ್ಭುತ ಹಾಡುಗಾರಿಕೆಯನ್ನು ಗುರುತಿಸಿ ಅವರಿಗೆ 2017ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.