ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ ಕೊಟ್ಟ ಹೆಬ್ಬಾಳ್ಕರ್


ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ ಕೊಟ್ಟ ಹೆಬ್ಬಾಳ್ಕರ್
ಬೆಳಗಾವಿ: ಕಳೆದ ಎರಡು ತಿಂಗಳಿನಿಂದ ಗೃಹಲಕ್ಷ್ಮಿ ಫಲಾನುಭವಿಗಳ ಖಾತೆಗೆ ಹಣ ಜಮಾ ಆಗದ ಹಿನ್ನೆಲೆ ಫಲಾನುಭವಿಗಳು ಆತಂಕಕ್ಕೆ ಒಳಗಾಗಿದ್ದಾರೆ. ಆದರೆ ಇದೀಗ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ, ಬಾಕಿ ಇರುವ ಎರಡು ತಿಂಗಳ ಹಣ ಯಾವಾಗ ಮಹಿಳೆಯರ ಖಾತೆಗೆ ಜಮಾ ಆಗಲಿದೆ ಎಂದು ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿ ಮಾತನಾಡಿದ ಅವರು, ಹಿಂದಿನ ಮಾದರಿಯಂತೆ ಜಿಲ್ಲಾ ಉಪ ನಿರ್ದೇಶಕರ ಮೂಲಕವೇ ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ. ತಾಲೂಕು ಪಂಚಾಯಿತಿ ಮೂಲಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಹಣ ರವಾನೆಯಾಗುತ್ತಿದ್ದು, ಉಪ ನಿರ್ದೇಶಕರ ಮೂಲಕ ಹಣ ಹಾಕಲಾಗುತ್ತಿದೆ ಎಂದರು.