ಫೆ.18ಕ್ಕೆ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ನಿವೃತ್ತಿ
ಫೆ.18ಕ್ಕೆ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ನಿವೃತ್ತಿ
ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತರಾಗಿರುವ ರಾಜೀವ್ ಕುಮಾರ್ ಅವರ ಅಧಿಕಾರ ಅವಧಿ ಫೆಬ್ರವರಿ 18ರಂದು ಕೊನೆಗೊಳ್ಳಲಿದೆ. ಈ ಹಿನ್ನಲೆಯಲ್ಲಿ ಮುಂದಿನ ಚುನಾವಣಾ ಆಯುಕ್ತರ ಹೆಸರನ್ನು ಅಂತಿಮಗೊಳಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಉನ್ನತ ಮಟ್ಟದ ಆಯ್ಕೆ ಸಮಿತಿ ಸೋಮವಾರ ಸಭೆ ಸೇರುವ ಸಾಧ್ಯತೆಗಳು ಇವೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಪ್ರಧಾನಿ ನೇತೃತ್ವದ ಆಯ್ಕೆ ಸಮಿತಿಯಲ್ಲಿ ಪಿಎಂ ನರೇಂದ್ರ ಮೋದಿ, ಸಚಿವ ಅರ್ಜುನ್ ರಾಮ್ ಮೇಘವಾಲ್, ವಿಪಕ್ಷ ನಾಯಕ ರಾಹುಲ್ ಗಾಂಧಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗಿಯಾಗಲಿದ್ದಾರೆ. ಪ್ರಧಾನಿಗಳ ಅಧಿಕೃತ ನಿವಾಸದಲ್ಲೇ ಸಭೆ ನಡೆಯುವ ಸಾಧ್ಯತೆಗಳಿವೆ ಎನ್ನಲಾಗಿದೆ.