• 22 ಮಾರ್ಚ್ 2025

ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ ವೇಳೆ ಭೀಕರ ವಾಹನ ಅಪಘಾತ :10 ಭಕ್ತರು ಬಲಿ

 ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ ವೇಳೆ ಭೀಕರ ವಾಹನ ಅಪಘಾತ :10 ಭಕ್ತರು ಬಲಿ
Digiqole Ad

ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ ವೇಳೆ ಭೀಕರ ವಾಹನ ಅಪಘಾತ :10 ಭಕ್ತರು ಬಲಿ

ಪ್ರಯಾಗ್ ರಾಜ್: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ ವೇಳೆ ಬಸ್ಸಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ 10 ಭಕ್ತರು ಸಾವನ್ನಪ್ಪಿರುವ ಘಟನೆ ಪ್ರಯಾಗ್ ರಾಜ್ ನಲ್ಲಿ ನಡೆದಿದೆ. ಪ್ರಯಾಗ್ ರಾಜ್ – ಮಿರ್ಜಾಪುರ ಹೆದ್ದಾರಿಯ ಮೇಜಾ ಪ್ರದೇಶದಲ್ಲಿ ಬುಲೆರೋ ಕಾರು ಬಸ್ಸಿಗೆ ಡಿಕ್ಕಿ ಹೊಡೆದು ಅವಘಡ ಸಂಭವಿಸಿದೆ. 19 ಜನರು ಗಾಯಗೊಂಡಿದ್ದಾರೆ.

 ನದಿಗಳ ಸಂಗಮದಲ್ಲಿ ಸ್ಥಾನ ಮಾಡಲು ಛತ್ತೀಸ್ಗಡದ ಕೊರ್ಬಾ ಜಿಲ್ಲೆಯಿಂದ ಭಕ್ತರು ಪ್ರಯಾಣಿಸುತ್ತಿದ್ದರು. ಭಕ್ತರನ್ನು ಕರೆದೊಯ್ಯುತ್ತಿದ್ದ ಬುಲೆರೋ ಮಧ್ಯ ಪ್ರದೇಶದ ರಾಜ್ ಗಢ ಜಿಲ್ಲೆಯಿಂದ ಪ್ರಯಾಣಿಸುತ್ತಿದ್ದ ಬಸ್ ಗೆ ಡಿಕ್ಕಿ ಹೊಡೆದಿದೆ.

Digiqole Ad

ಈ ಸುದ್ದಿಗಳನ್ನೂ ಓದಿ