ದೆಹಲಿ ರೈಲು ನಿಲ್ದಾಣ ಕಾಲ್ತುಳಿತ ಪ್ರಕರಣ: ಭಾರತೀಯ ರೈಲ್ವೇ ಇಲಾಖೆ – 10 ಲಕ್ಷ ರೂ. ಪರಿಹಾರ ಘೋಷಣೆ
ದೆಹಲಿ ರೈಲು ನಿಲ್ದಾಣ ಕಾಲ್ತುಳಿತ ಪ್ರಕರಣ: ಭಾರತೀಯ ರೈಲ್ವೇ ಇಲಾಖೆ – 10 ಲಕ್ಷ ರೂ. ಪರಿಹಾರ ಘೋಷಣೆ
ನವದೆಹಲಿ: ದೆಹಲಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ರೈಲ್ವೇ ಇಲಾಖೆಯು ಪರಿಹಾರ ಘೋಷಣೆ ಮಾಡಿದ್ದು, ಮೃತರ ಕುಟುಂಬಕ್ಕೆ ತಲಾ10 ಲಕ್ಷ ರೂಪಾಯಿ ನೀಡುವುದಾಗಿ ಘೋಷಿಸಿದೆ.
ಮೃತರ ಕುಟುಂಬಕ್ಕೆ 10 ಲಕ್ಷ ರೂಪಾಯಿ, ಗಂಭೀರವಾಗಿ ಗಾಯಗೊಂಡವರಿಗೆ 2.5 ಲಕ್ಷ ರೂಪಾಯಿ ಮತ್ತು ಸಣ್ಣಪುಟ್ಟ ಗಾಯಗಳಾದವರಿಗೆ 1 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ತಿಳಿಸಿದೆ. ಭೀಕರ ಕಾಲ್ತುಳಿತ ಪ್ರಕರಣದಲ್ಲಿ 11 ಮಹಿಳೆಯರು ಮತ್ತು 4 ಮಕ್ಕಳು ಸೇರಿ ಒಟ್ಟು 18 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.