ಇನ್ಮುಂದೆ ಶಾಲಾ ಮಕ್ಕಳಿಗೆ ಚಿಕ್ಕಿ ವಿತರಣೆ ಇಲ್ಲ: ರಾಜ್ಯ ಸರಕಾರ ಆದೇಶ
ಇನ್ಮುಂದೆ ಶಾಲಾ ಮಕ್ಕಳಿಗೆ ಚಿಕ್ಕಿ ವಿತರಣೆ ಇಲ್ಲ: ರಾಜ್ಯ ಸರಕಾರ ಆದೇಶ
ಬೆಂಗಳೂರು: ಬಿಸಿಯೂಟ ಯೋಜನೆಯಡಿ ಸರಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಮಕ್ಕಳಿಗೆ ವಿತರಿಸುತ್ತಿದ್ದ ಚಿಕ್ಕಿಯಲ್ಲಿ ಆರೋಗ್ಯಕ್ಕೆ ಹಾನಿಯುಂಟು ಮಾಡುವ ಅಂಶಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಚಿಕ್ಕಿ ವಿತರಣೆ ಸ್ಥಗಿತಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಚಿಕ್ಕಿಯನ್ನು ಸರಿಯಾಗಿ ಸಂಗ್ರಹಿಸದೆ ಇದ್ದಲ್ಲಿ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳು ಇರುವುದರಿಂದ ವಿತರಣೆ ಸ್ಥಗಿತಗೊಳಿಸಿ, ಮೊಟ್ಟೆ ಅಥವಾ ಬಾಳೆಹಣ್ಣು ವಿತರಿಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.
ಈ ಸಂಬಂಧ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಲು ಇಲಾಖಾ ಆಯುಕ್ತರಿಗೆ ನಿರ್ದೇಶನ ನೀಡಿದೆ.