ನಂದಿನಿ ಹಾಲಿನ ದರ ಮತ್ತಷ್ಟು ಏರಿಕೆ ಆತಂಕ!
ನಂದಿನಿ ಹಾಲಿನ ದರ ಮತ್ತಷ್ಟು ಏರಿಕೆ ಆತಂಕ!
ಬೆಂಗಳೂರು: ರಾಜ್ಯದ ಜನರಿಗೆ ನಂದಿನಿ ಹಾಲಿನ ದರ ಮತ್ತೆ ಏರಿಕೆ ಆಗುವ ಆತಂಕ ಎದುರಾಗಿದೆ. ಶೀಘ್ರದಲ್ಲೇ ಹಾಲಿನ ದರದಲ್ಲಿ ಪರಿಷ್ಕರಣೆ ಮಾಡಿಸಲು KMF ಸಿದ್ಧತೆ ನಡೆಸಿದೆ ಎನ್ನಲಾಗಿದೆ. ಲೀಟರ್ ಗೆ 5 ರೂ. ಹೆಚ್ಚಳ ಮಾಡುವಂತೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.
ಮುಖ್ಯಮಂತ್ರಿಗಳ ಅನುಮತಿಗಾಗಿ KMF ಆಡಳಿತ ಮಂಡಳಿ ಕಾಯುತ್ತಿದೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್ ನೀಡಿದ ಬೆನ್ನಲ್ಲೇ ಹಾಲಿನ ದರ ಏರಿಕೆಯಾಗಲಿದೆ.
ರೈತರು ಹಾಗೂ ಹಾಲು ಒಕ್ಕೂಟಗಳಿಂದ ದರ ಏರಿಸುವ ಬಗ್ಗೆ ಆಗ್ರಹ ಹಿನ್ನೆಲೆಯಲ್ಲಿ KMF ಸರಕಾರದ ಮುಂದೆ ಪ್ರಸ್ತಾಪ ಇಟ್ಟಿದೆ.