ಫೆ.24 ರಂದು ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ 19ನೇ ಕಂತಿನ ಹಣ ಬಿಡುಗಡೆ
ಫೆ.24 ರಂದು ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ 19ನೇ ಕಂತಿನ ಹಣ ಬಿಡುಗಡೆ
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 19ನೇ ಕಂತಿನ ಹಣ ಇದೇ ತಿಂಗಳಲ್ಲಿ ಬಿಡುಗಡೆಯಾಗಲಿದೆ. ಫೆಬ್ರವರಿ 24 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹಣ ಬಿಡುಗಡೆ ಮಾಡಲಿದ್ದಾರೆ. ಈ 19ನೇ ಕಂತಿನ ಹಣವು ಫೆಬ್ರವರಿ ಕೊನೆಯ ವಾರದಲ್ಲಿ ಬಿಡುಗಡೆ ಆಗಬಹುದೆಂದು ಈ ಹಿಂದೆ ಹಲವು ವರದಿಗಳು ಅಂದಾಜು ಮಾಡಿದ್ದವು.
ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಕೂಡ ಸುಳಿವು ನೀಡಿದ್ದರು. ಇದೀಗ ಫೆಬ್ರವರಿ 24 ರಂದು ಹಣ ಬಿಡುಗಡೆ ಆಗುವುದು ಖಾತ್ರಿಯಾಗಿದೆ.