ಕೊಡಗು ವಿಶ್ವವಿದ್ಯಾನಿಲಯ ಮುಚ್ಚದಂತೆ ಆಗ್ರಹಿಸಿ ಮಾನವ ಸರಪಳಿ
ಕೊಡಗು ವಿಶ್ವವಿದ್ಯಾನಿಲಯ ಮುಚ್ಚದಂತೆ ಆಗ್ರಹಿಸಿ ಮಾನವ ಸರಪಳಿ
ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕೊಡಗು ವಿಶ್ವವಿದ್ಯಾನಿಲಯವನ್ನು ಮುಚ್ಚುವ ನಿರ್ದಾರಕ್ಕೆ ಬಂದಿರುವ ರಾಜ್ಯ ಸಚಿವ ಸಂಪುಟದ ಉಪಸಮಿತಿಯು ಕ್ರಮವನ್ನು ಖಂಡಿಸಿ ಕುಶಾಲನಗರದಲ್ಲಿ ಇಂದು ವಿದ್ಯಾರ್ಥಿಗಳು ಎ.ಬಿ.ವಿ.ಪಿ. ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಮಾನವ ಸರಪಳಿ ನಿರ್ಮಿಸಿದರು.
ವಿವಿಧ ಕಾಲೇಜುಗಳಿಂದ ಮೆರವಣಿಗೆ ಮೂಲಕ ಕುಶಾಲನಗರ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ವೃತ್ತದಲ್ಲಿ ಜಮಾವಣೆಗೊಂಡು ರಾಜ್ಯ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಯಾವುದೇ ಕಾರಣಕ್ಕೂ ಕೊಡಗು ವಿಶ್ವವಿದ್ಯಾನಿಲಯವನ್ನು ಮುಚ್ಚಬಾರದು ಎಂದು ಒತ್ತಾಯಿಸಿ ಮಾನವ ಸರಪಳಿ ನಿರ್ಮಿಸಿ ಕೆಲಕಾಲ ರಸ್ತೆ ತಡೆ ನಡೆಸಿದರು..