ಬೆಳ್ತಂಗಡಿ: 7ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ!
ಬೆಳ್ತಂಗಡಿ: 7ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ!
ಬೆಳ್ತಂಗಡಿ: 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆತಂಕಕಾರಿ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ನಿನ್ನ ನಡೆದಿದೆ, ಇಂದು ತಡವಾಗಿ ಬೆಳಕಿಗೆ ಬಂದಿದೆ. ಮೃತ ವಿದ್ಯಾರ್ಥಿಯನ್ನು ತಣ್ಣೀರುಪಂತ ನಿವಾಸಿ ಡೊಂಬಯ್ಯ ಗೌಡರ ಪುತ್ರ ಶ್ರವಣ್ ಎಂದು ಗುರುತಿಸಲಾಗಿದೆ.
ಬಾಲಕ ಮಾನಸಿಕ ಖಿನ್ನತೆಗೆ ಒಳಗಾಗಿ ನಿನ್ನೆ ರಾತ್ರಿ ವೇಳೆ ಮನೆಯ ಕೋಣೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ. ಪುಂಜಾಲಕಟ್ಟೆ ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.