ಗಂಗಾ ನದಿ ನೀರು ಸ್ನಾನಕ್ಕೆ ಯೋಗ್ಯವಲ್ಲ! ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ
ಗಂಗಾ ನದಿ ನೀರು ಸ್ನಾನಕ್ಕೆ ಯೋಗ್ಯವಲ್ಲ! ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ
ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಮಹಾಕುಂಭ ಮೇಳ ನಡೆಯುತ್ತಿರುವ ಮಧ್ಯೆ ಇದೀಗ ಅಘಾತಕಾರಿ ಮಾಹಿತಿಯೊಂದು ಬಹಿರಂಗವಾಗಿದೆ.
ಗಂಗಾ ನದಿಯಲ್ಲಿ ಮಲ ಬ್ಯಾಕ್ಟೀರಿಯಾ ಪ್ರಮಾಣ ಹೆಚ್ಚಾಗಿದ್ದು, ಸ್ನಾನಕ್ಕೆ ಯೋಗ್ಯವಲ್ಲ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ತಿಳಿಸಿದೆ.
ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಗಂಗಾ ನದಿಯ ನೀರು ಸ್ಯಾಂಪಲ್ ತೆಗೆದುಕೊಂಡು ಪರೀಕ್ಷೆ ನಡೆಸಿತ್ತು. ನೀರಿನಲ್ಲಿ ಅಧಿಕ ಪ್ರಮಾಣದಲ್ಲಿ ಫೆಕಲ್ ಕೋಲಿಫಾರ್ಮ್ ಬ್ಯಾಕ್ಟೀರಿಯಾ ಇವೆ, ನೀರಿನ ಬಯೋಕೆಮಿಕಲ್ ಆಕ್ಸಿಜನ್ ಡಿಮ್ಯಾಂಡ್ ಸ್ನಾನಕ್ಕೆ ಯೋಗ್ಯವಲ್ಲ, ಕುಂಭಮೇಳದಲ್ಲಿ ಜನರು ಸ್ನಾನ ಮಾಡುವುದರಿಂದ ಫೆಕಲ್ ಕೋಲಿಫಾರ್ಮ್ ಬ್ಯಾಕ್ಟೀರಿಯಾ ಹೆಚ್ಚಾಗುತ್ತೆ ಎಂದು ಹೇಳಲಾಗಿದೆ.