ಅರಣ್ಯ ಪಡೆಗೆ ಮೊದಲ ಮಹಿಳಾ ಮುಖ್ಯಸ್ಥೆಯಾಗಿ ಮೀನಾಕ್ಷಿ ನೇಗಿ ನೇಮಕ
ಅರಣ್ಯ ಪಡೆಗೆ ಮೊದಲ ಮಹಿಳಾ ಮುಖ್ಯಸ್ಥೆಯಾಗಿ ಮೀನಾಕ್ಷಿ ನೇಗಿ ನೇಮಕ
ಬೆಂಗಳೂರು: ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯ ಎಲ್ಲಾ ಪಡೆಗಳ ಮುಖ್ಯಸ್ಥರಾಗಿ ಹಿರಿಯ IFS ಅಧಿಕಾರಿಯಾಗಿರುವ ಮೀನಾಕ್ಷಿ ನೇಗಿ ಅವರನ್ನು ನೇಮಿಸಿ ಕರ್ನಾಟಕ ಸರಕಾರ ಆದೇಶ ಹೊರಡಿಸಿದೆ. ಈ ಕುರಿತು ಕರ್ನಾಟಕ ಆಡಳಿತ ಮತ್ತು ಸಿಬ್ಬಂದಿ ಸುಧಾರಣಾ ಇಲಾಖೆಯು ಅಧೀನ ಕಾರ್ಯದರ್ಶಿ ಪ್ರಸನ್ನ ಕುಮಾರ್ ಆದೇಶ ಹೊರಡಿಸಿದ್ದಾರೆ.
ಕಳೆದ ಕೆಲ ವರ್ಷಗಳಿಂದ ರಾಜ್ಯದ ಅರಣ್ಯ ಇಲಾಖೆಯಲ್ಲಿ ಹಲವಾರು ಮಹಿಳೆಯರು ಸೇವೆ ಸಲ್ಲಿಸಿದ್ದಾರೆ. ಆದರೆ ಇದುವರೆಗೂ ಇಲಾಖೆಯ ಅತ್ಯುನ್ನತ ಹುದ್ದೆಯನ್ನು ಮಹಿಳೆಯೊಬ್ಬರು ಅಲಂಕರಿಸಿರಲಿಲ್ಲ. ಇದೀಗ ಮೀನಾಕ್ಷಿ ನೇಗಿ ಅವರು ಅರಣ್ಯ ಇಲಾಖೆ ಪಡೆಗಳ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿಲಿದ್ದಾರೆ.