‘ಗೃಹಲಕ್ಷ್ಮಿ’ ಫಲಾನುಭವಿಗಳಿಗೆ ಸಿಹಿ ಸುದ್ದಿ
‘ಗೃಹಲಕ್ಷ್ಮಿ’ ಫಲಾನುಭವಿಗಳಿಗೆ ಸಿಹಿ ಸುದ್ದಿ
ಬೆಂಗಳೂರು : ಮೂರು ತಿಂಗಳಿಂದ ಬಂದ್ ಆಗಿದ್ದ ಗೃಹಲಕ್ಷ್ಮಿ ಜಮೆ ಪ್ರಕ್ರಿಯೆಗೆ ಇಂದು ಮರು ಚಾಲನೆ ಸಿಗಲಿದೆ. ನವೆಂಬರ್ ತಿಂಗಳ ಹಣ ಇಂದು ಫಲಾನುಭವಿಗಳ ಖಾತೆಗೆ ಜಮೆ ಆಗಲಿದೆ.
ಅದೇ ರೀತಿ ಡಿಸೆಂಬರ್ ತಿಂಗಳ ಹಣವನ್ನು ಮುಂದಿನ ಸೋಮವಾರ ಫಲಾನುಭವಿಗಳ ಖಾತೆಗೆ ಜಮೆ ಮಾಡುವ ಕೆಲಸ ಆಗಲಿದೆ. ಈ ಮೂಲಕ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ ದೊರಕಿದೆ.
ಹಣ ಜಮೆ ಮಾಡುವ ಪ್ರಕ್ರಿಯೆಯನ್ನು ಬದಲಾವಣೆ ಮಾಡಿದ ಕಾರಣ ಸ್ವಲ್ಪ ವಿಳಂಬವಾಗಿತ್ತು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.