15,000 ಸಾವಿರ ಶಿಕ್ಷಕರ ಹುದ್ದೆ ಭರ್ತಿಗೆ ಪ್ರಸ್ತಾಪನೆ
15,000 ಸಾವಿರ ಶಿಕ್ಷಕರ ಹುದ್ದೆ ಭರ್ತಿಗೆ ಪ್ರಸ್ತಾಪನೆ
ಬೆಂಗಳೂರು: ಸರಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ನೀಗಿಸುವ ಉದ್ದೇಶದಿಂದ 15 ಸಾವಿರ ಶಿಕ್ಷಕರ ಹುದ್ದೆ ಭರ್ತಿಗೆ ಅವಕಾಶ ನೀಡುವಂತೆ ಮುಖ್ಯಮಂತ್ರಿಗೆ ಪ್ರಸ್ತಾವನೆ ಸಲ್ಲಿಸಿರುವುದಾಗಿ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇದೆ,ಈ ಹಿನ್ನೆಲೆಯಲ್ಲಿ ಶಿಕ್ಷಕರ ಕೊರತೆ ನೀಗಿಸಲು 15 ಸಾವಿರ ಶಿಕ್ಷಕರನ್ನು ಕಲ್ಪಿಸುವಂತೆ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದೇವೆ,ಅಲ್ಲದೆ ನಮಗೆ ಪಿಯುಸಿ ಮತ್ತು ಪ್ರೌಢಶಾಲಾ ಶಿಕ್ಷಕರ ಕೊರತೆ ಹೆಚ್ಚಿದೆ ಇದಕ್ಕೆ ಆದ್ಯತೆ ನೀಡುವಂತೆ ಮನವಿ ಮಾಡಿದ್ದೇವೆ ಎಂದರು.