ಸಿಇಟಿ- ಪಿಯುಸಿ ಪರೀಕ್ಷೆ ನಂತರವೂ ದಾಖಲೆ ಪರಿಶೀಲನೆ, ಆತಂಕ ಬೇಡ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ


ಸಿಇಟಿ- ಪಿಯುಸಿ ಪರೀಕ್ಷೆ ನಂತರವೂ ದಾಖಲೆ ಪರಿಶೀಲನೆ, ಆತಂಕ ಬೇಡ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ
ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಬರೆಯುವ ಅಭ್ಯರ್ಥಿಗಳು ತಮ್ಮ ದಾಖಲೆಗಳನ್ನು ದ್ವಿತೀಯ ಪಿಯುಸಿ ಪರೀಕ್ಷೆ ನಂತರವೂ ತಮ್ಮ ಕಾಲೇಜುಗಳಲ್ಲಿ ಪರಿಶೀಲಿಸಿಕೊಳ್ಳಲು ಅವಕಾಶ ಇರುತ್ತದೆ. ಈ ವಿಷಯದಲ್ಲಿ ಆತಂಕ ಪಡುವ ಅಗತ್ಯ ಇಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಅವರು ಮಾಹಿತಿ ನೀಡಿದ್ದಾರೆ. ಪತ್ರಿಕಾ ಹೇಳಿಕೆಯಲ್ಲಿ, ಸಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸಿ, ಶುಲ್ಕ ಪಾವತಿಸುವ ಎಲ್ಲಾ ಅಭ್ಯರ್ಥಿಗಳಿಗೂ ಪ್ರವೇಶ ಪತ್ರವನ್ನು ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.