ಮಹಾಕುಂಭ ಮೇಳ: ಯಾತ್ರಿಕರ ದುರ್ಮರಣ- ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಈಶ್ವರ ಖಂಡ್ರೆ
ಮಹಾಕುಂಭ ಮೇಳ: ಯಾತ್ರಿಕರ ದುರ್ಮರಣ- ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಈಶ್ವರ ಖಂಡ್ರೆ
ಬೆಂಗಳೂರು : ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭ ಮೇಳಕ್ಕೆ ತೆರಳುತ್ತಿದ್ದ ವೇಳೆ ಉತ್ತರ ಪ್ರದೇಶದ ಬಳಿ ಅಪಘಾತದಲ್ಲಿ ಬೀದರ್ ನ ಐವರು ಮೃತಪಟ್ಟಿದ್ದು, ಮೃತರ ಕುಟುಂಬಕ್ಕೆ ಸಚಿವ ಈಶ್ವರ ಖಂಡ್ರೆ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಲಾಡಗೇರಿಯ 14 ಜನರು ಪ್ರಯಾಣಿಸುತ್ತಿದ್ದ ಕ್ರೂಸರ್ ವಾಹನ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದೆ, ಅಪಘಾತದಲ್ಲಿ ಐವರು ಮೃತಪಟ್ಟಿದ್ದು, ಎಂಟು ಜನರು ಗಾಯಗೊಂಡಿರುವ ಸುದ್ದಿ ತಿಳಿದು ಆಘಾತವಾಯಿತು. ಮೃತರ ಪಾರ್ಥಿವ ಶರೀರವನ್ನು ಬೀದರಿಗೆ ತರಲು ಸೂಚಿಸಿರುವುದಾಗಿ ತಿಳಿಸಿದ್ದಾರೆ.