ಕಿಡಿಗೇಡಿಗಳಿಂದ ಚಾಮುಂಡಿ ಬೆಟ್ಟದಲ್ಲಿ ಬೆಂಕಿ: ಕಾಡ್ಗಿಚ್ಚಿಗೆ 35 ಎಕರೆ ಅರಣ್ಯ ನಾಶ
ಕಿಡಿಗೇಡಿಗಳಿಂದ ಚಾಮುಂಡಿ ಬೆಟ್ಟದಲ್ಲಿ ಬೆಂಕಿ: ಕಾಡ್ಗಿಚ್ಚಿಗೆ 35 ಎಕರೆ ಅರಣ್ಯ ನಾಶ
ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಶುಕ್ರವಾರ ಕಾಣಿಸಿಕೊಂಡ ಬೆಂಕಿಯಿಂದ 35 ಎಕರೆ ಕಾಡು ಸಂಪೂರ್ಣ ಸುಟ್ಟು ಹೋಗಿದೆ. ಮಾನವ ನಿರ್ಮಿತ ಬೆಂಕಿಯು ಚಾಮುಂಡಿ ಬೆಟ್ಟವನ್ನು ಆವರಿಸಿದ್ದು, ದೇವಿಕೆರೆ, ಗೊಲ್ಲಹಳ್ಳಿ ಭಾಗದಲ್ಲಿ 35 ಎಕರೆ ಕಾಡು ಸಂಪೂರ್ಣ ಸುಟ್ಟು ಹೋಗಿದೆ.
ಉದ್ದೇಶ ಪೂರ್ವಕವಾಗಿ ಬೆಂಕಿ ಹಾಕಿದ್ದಾರೆ. ಆ ಬಗ್ಗೆ ತನಿಖೆ ನಡೆಯುತ್ತಿದೆ ಗಾಳಿ ವೇಗ ಹಾಗೂ ಬಿಸಿಲಿನ ವಾತಾವರಣ ಇದ್ದುದರಿಂದ ಬೆಂಕಿ ಹೆಚ್ಚಿತ್ತು ನಾವು ಎಷ್ಟೇ ಪ್ರಯತ್ನ ಪಟ್ಟರೂ ಆ ಜಾಗಕ್ಕೆ ಹೋಗಲು ಸಾಧ್ಯವಾಗಲಿಲ್ಲ. ಅಗ್ನಿಶಾಮಕ ದಳ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಬೆಂಕಿ ನಂದಿಸಲು ಶ್ರಮ ಹಾಕಿದ್ದಾರೆ. ಸದ್ಯ ಬೆಂಕಿ ನಿಯಂತ್ರಣಕ್ಕೆ ಬಂದಿದೆ ಎಂದು ತಿಳಿಸಿದರು.