• 22 ಮಾರ್ಚ್ 2025

ಕಾರ್ಕಳ: ಪರಶುರಾಮ ಥೀಮ್ ಪಾರ್ಕ್ ಬಳಿ ಅಗ್ನಿ ಅವಘಡ

 ಕಾರ್ಕಳ: ಪರಶುರಾಮ ಥೀಮ್ ಪಾರ್ಕ್ ಬಳಿ ಅಗ್ನಿ ಅವಘಡ
Digiqole Ad

ಕಾರ್ಕಳ: ಪರಶುರಾಮ ಥೀಮ್ ಪಾರ್ಕ್ ಬಳಿ ಅಗ್ನಿ ಅವಘಡ

ಬೈಲೂರಿನ ಪರಶುರಾಮ ಥೀಮ್ ಪಾರ್ಕ್ ಬಳಿ ಫೆ.24ರಂದು ಅಗ್ನಿ ಅವಘಡ ಸಂಭವಿಸಿದೆ.ಮುಖ್ಯರಸ್ತೆಯಲ್ಲಿ ತೆಂಗಿನ ಮರವೊಂದು ವಿದ್ಯುತ್ ಕಂಬದ ಮೇಲೆ ಬಿದ್ದ ಪರಿಣಾಮ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದೆ.

ಮಾಹಿತಿ ಪಡೆದ ಕಾರ್ಕಳ ಅಗ್ನಿಶಾಮಕ ಮತ್ತು ರಕ್ಷಣಾ ವಿಭಾಗದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಹತೋಟಿಗೆ ತಂದರು. ಬೆಟ್ಟದ ಬುಡದಲ್ಲಿ ಬೆಂಕಿ ಹೊತ್ತಿಕೊಂಡಿದ್ದರಿಂದ ಸುತ್ತಮುತ್ತಲಿನ ಪ್ರದೇಶಕ್ಕೂ ಬೆಂಕಿ ವ್ಯಾಪಿಸಿದೆ.ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿ ಚಂದ್ರಶೇಖರ್, ಸಿಬ್ಬಂದಿಗಳಾದ ರೂಪೇಶ್, ಚಾಲಕ ಸಂಜಯ್, ಮುಜಾಂಬಿಲ್, ಭೀಮಪ್ಪ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

 

 

Digiqole Ad

ಈ ಸುದ್ದಿಗಳನ್ನೂ ಓದಿ