ಭಾರತಕ್ಕೆ ಪ್ರವೇಶಿಸುವ ವಿದೇಶಿಯರಿಗೆ ಹೊಸ ಕಾನೂನು! ಈ ಕುರಿತು ಮಸೂದೆ ಮಂಡನೆ ಯಾವಾಗ?

ಭಾರತಕ್ಕೆ ಪ್ರವೇಶಿಸುವ ವಿದೇಶಿಯರಿಗೆ ಹೊಸ ಕಾನೂನು!
ಈ ಕುರಿತು ಮಸೂದೆ ಮಂಡನೆ ಯಾವಾಗ?
ಅಮೇರಿಕಾದಲ್ಲಿ ವಲಸೆ ನಿಯಮ ಜಾರಿಗೆ ತಂದ ಬೆನ್ನಲ್ಲೇ ಇದೀಗ ಭಾರತ ಕೂಡ ವಲಸೆ ನಿಯಮ ಜಾರಿಗೆ ತರಲು ಮುಂದಾಗಿದೆ.
ಮಾರ್ಚ್ 16 ರಂದು ನಡೆಯಲಿರುವ ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಕೇಂದ್ರ ಸಚಿವ ಅಮಿತ್ ಶಾ ವಲಸೆ ಮತ್ತು ಅಕ್ರಮ ವಿದೇಶಿ ವಲಸಿಗರ ಮಸೂದೆ ಮಂಡಿಸುವ ಸಾಧ್ಯತೆ ಇದೆ. ಭಾರತದಲ್ಲಿ ಪಾಸ್ಪೋರ್ಟ್ ಕಾಯ್ದೆ 1920, ವಿದೇಶಿಯರ ನೋಂದಣಿ ಕಾಯ್ದೆ 1939, ವಿದೇಶಿಯರ ಕಾಯ್ದೆ 1946 ವಲಸೆ ಕಾಯ್ದೆ 2000, ಭಾರತದಲ್ಲಿ ವಿದೇಶಿಯರಿಗೆ ಸಂಬಂಧಿಸಿದ ವಿವಿಧ ಅಂಶಗಳನ್ನು ನಿಯಂತ್ರಣ ಮಾಡುತ್ತದೆ. ಈಗ ಅಸ್ತಿತ್ವ ದಲ್ಲಿರುವ ನಾಲ್ಕು ಕಾಯ್ದೆಗಳನ್ನು ರದ್ದುಗೊಳಿಸಿ, ನೂತನ ಕಾಯ್ದೆ ಜಾರಿಗೆ ಬರಲಿದೆ.
