ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ
ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ
ಬೆಂಗಳೂರು: ರಾಜ್ಯದಲ್ಲಿ ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಮಾರ್ಚ್ 20ರವರೆಗೆ ನಡೆಯಲಿದೆ.
ಈಗಾಗಲೇ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಮಾಡಿಕೊಂಡಿರುವ ಶಿಕ್ಷಣ ಇಲಾಖೆ ಇದೇ ಮೊದಲ ಬಾರಿಗೆ ವೆಬ್ ಕಾಸ್ಟಿಂಗ್ ಕಣ್ಗಾವಲು ವ್ಯವಸ್ಥೆ ಮಾಡಿದೆ.
ಕಳೆದ ವರ್ಷ SSLC ಪರೀಕ್ಷೆಗೆ ವೆಬ್ ಕಾಸ್ಟಿಂಗ್ ವ್ಯವಸ್ಥೆ ಜಾರಿ ಮಾಡಲಾಗಿತ್ತು.
ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಗೂ ವ್ಯವಸ್ಥೆ ಮಾಡುವ ಮೂಲಕ ಪರೀಕ್ಷಾ ಚಟುವಟಿಕೆಗಳ ಮೇಲೆ ನಿಗಾ ಇಟ್ಟಿದೆ. ಪರೀಕ್ಷಾ ಅಕ್ರಮ ತಡೆಯುವ ನಿಟ್ಟಿನಲ್ಲಿ ಈ ಕ್ರಮ ಕೈಗೊಂಡಿರುವುದಾಗಿ ಶಿಕ್ಷಣ ಇಲಾಖೆ ಹೇಳಿದೆ.