• 19 ಮಾರ್ಚ್ 2025

ಉತ್ತರಾಖಂಡದಲ್ಲಿ ಹಿಮಪಾತ- 50ಕ್ಕೂ ಹೆಚ್ಚು ಕಾರ್ಮಿಕರು ಸಿಲುಕಿರುವ ಸಾಧ್ಯತೆ

 ಉತ್ತರಾಖಂಡದಲ್ಲಿ ಹಿಮಪಾತ- 50ಕ್ಕೂ ಹೆಚ್ಚು ಕಾರ್ಮಿಕರು ಸಿಲುಕಿರುವ ಸಾಧ್ಯತೆ
Digiqole Ad

ಉತ್ತರಾಖಂಡದಲ್ಲಿ ಹಿಮಪಾತ- 50ಕ್ಕೂ ಹೆಚ್ಚು ಕಾರ್ಮಿಕರು ಸಿಲುಕಿರುವ ಸಾಧ್ಯತೆ

ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಹಿಮಪಾತ ಸಂಭವಿಸಿದ್ದು, ಮಾನಾ ಗ್ರಾಮದಲ್ಲಿ 57 ಕಾರ್ಮಿಕರು ಸಿಲುಕಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ.

10 ಕಾರ್ಮಿಕರು ಸುರಕ್ಷಿತವಾಗಿ ಹೊರಬಂದಿದ್ದಾರೆ. ಇನ್ನುಳಿದ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್), ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್), ಜಿಲ್ಲಾಡಳಿತ, ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ (ಐಡಿಬಿಪಿ) ಮತ್ತು ಗಡಿ ರಸ್ತೆ ಸಂಸ್ಥೆ (ಬಿಆರ್‌ಒ) ತಂಡಗಳು ಸ್ಥಳದಲ್ಲಿ ಕಾರ್ಮಿಕರ ಕಾರ್ಯಾಚರಣೆ ನಡೆಸುತ್ತಿವೆ.

ಫೆಬ್ರವರಿ 28 ರ ತಡರಾತ್ರಿ ವರೆಗೆ ಉತ್ತರಾಖಂಡದಲ್ಲಿ ಅತಿ ಹೆಚ್ಚು ಮಳೆ ಬೀಳುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.

Digiqole Ad

ಈ ಸುದ್ದಿಗಳನ್ನೂ ಓದಿ