• 18 ಮಾರ್ಚ್ 2025

ಕೇರಳ: ಮೀನು ಗಂಟಲಲ್ಲಿ ಸಿಲುಕಿಕೊಂಡು ಯುವಕ ಸಾವು!

 ಕೇರಳ: ಮೀನು ಗಂಟಲಲ್ಲಿ ಸಿಲುಕಿಕೊಂಡು ಯುವಕ ಸಾವು!
Digiqole Ad

ಕೇರಳ: ಮೀನು ಗಂಟಲಲ್ಲಿ ಸಿಲುಕಿಕೊಂಡು ಯುವಕ ಸಾವು!

ಕೇರಳ: ಭತ್ತದ ಗದ್ದೆಯಲ್ಲಿ ಮೀನು ಹಿಡಿಯುತ್ತಿದ್ದಾಗ ಮೀನುವೊಂದು ಗಂಟಲೊಳಗೆ ಹೋಗಿ ಯುವಕನೋರ್ವ ಸಾವನ್ನಪ್ಪಿರುವ ಘಟನೆ ಆಲಪ್ಪುಳ ಸಮೀಪದ ಕಾಯಂಕುಲಂನಲ್ಲಿ ಭಾನುವಾರ ನಡೆದಿದೆ.

ಮೃತ ಯುವಕನನ್ನು ಪುತ್ತುಪ್ಪಲ್ಲಿಯ ಆದರ್ಶ್ ಅಲಿಯಾಸ್ ಉನ್ನಿ (25) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಜೆ 4.30ರ ಸುಮಾರಿಗೆ ತನ್ನ ಸ್ನೇಹಿತರೊಂದಿಗೆ ಗದ್ದೆಗೆ ನೀರು ಹಾಯಿಸಿ ಮೀನು ಹಿಡಿಯುತ್ತಿದ್ದಾಗ ಈ ಘಟನೆ ನಡೆದಿದೆ. ಇನ್ನೊಂದು ಮೀನನ್ನು ಹಿಡಿಯಲು ಯತ್ನಿಸುತ್ತಿದ್ದಾಗ ಮೀನೊಂದು ಆತನ ಬಾಯಿ ಕಚ್ಚಿಕೊಂಡು ಗಂಟಲೊಳಗೆ ಹೋಗಿ ಸಿಲುಕಿಕೊಂಡಿದೆ. ಕೂಡಲೇ ಯುವಕನನ್ನು ಓಚಿರ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೂ ಆತನ ಪ್ರಾಣ ಉಳಿಸಲಾಗಲಿಲ್ಲ.

Digiqole Ad

ಈ ಸುದ್ದಿಗಳನ್ನೂ ಓದಿ