ಹಾಸ್ಟೇಲ್, ಕಾಲೇಜುಗಳಲ್ಲಿ ಮುನ್ನೆಚ್ಚರಿಕೆ ವಹಿಸಲು ಆರೋಗ್ಯ ಇಲಾಖೆ ಸೂಚನೆ
ಹಾಸ್ಟೇಲ್, ಕಾಲೇಜುಗಳಲ್ಲಿ ಮುನ್ನೆಚ್ಚರಿಕೆ ವಹಿಸಲು ಆರೋಗ್ಯ ಇಲಾಖೆ ಸೂಚನೆ
ಮಂಗಳೂರು-ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ವೈದ್ಯಕೀಯ ಕಾಲೇಜುಗಳು, ನರ್ಸಿಂಗ್ ಕಾಲೇಜುಗಳು, ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿಪೂರ್ವ ಕಾಲೇಜು ಶಿಕ್ಷಣ ಇಲಾಖೆ, ಪದವಿ ಕಾಲೇಜು, ತಾಂತ್ರಿಕ ಇಂಜಿನಿಯರಿಂಗ್ ಕಾಲೇಜು, ಸಮಾಜ ಕಲ್ಯಾಣ ಇಲಾಖೆಗಳ ಮುಖ್ಯಸ್ಥರುಗಳ ಸಭೆಯನ್ನು ಮಂಗಳವಾರ ಸರಕಾರಿ ಲೇಡಿಗೋಷನ್ ಆಸ್ಪತ್ರೆಯ ಸಭಾಂಗಣದಲ್ಲಿ ನಡೆಯಿತು.
ಬೇಸಿಗೆ ಕಾಲದಲ್ಲಿ ಶಿಕ್ಷಣ ಸಂಸ್ಥೆಗಳಲ್ಲಿ ತೆಗೆದುಕೊಳ್ಳಬೇಕಾಗುವ ಮುನ್ನೆಚ್ಚರಿಕೆ ಕ್ರಮಗಳ ಕುರಿತಂತೆ ಸಭೆಯನ್ನು ಕರೆಯಲಾಗಿದ್ದು, ಸಭೆಯಲ್ಲಿ ಹಾಜರಾಗಿರುವ ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರುಗಳಿಗೆ ಸಾಂಕ್ರಾಮಿಕ ರೋಗಗಳ ಬಗ್ಗೆ ಕಲುಷಿತ ಆಹಾರ ಮತ್ತು ನೀರಿನ ಮೂಲಕ ಹರಡು ಹೆಪಟೈಟಿಸ್ ಎ ಮತ್ತು ಬಿ ಕಾಯಿಲೆಗಳು, ಅತಿಸಾರ ಭೇದಿ, ವಿಷಮಶೀತ ಜ್ವರ (ಟೈಫಾಯ್ಡ್) ಮತ್ತು ಕಾಲರಾಗಳ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಮಾಹಿತಿ ನೀಡಲಾಯಿತು.
ಸುರಕ್ಷಿತ ಕುಡಿಯುವ ನೀರು ಮೂಲ ಪರೀಕ್ಷೆಗೊಳಪಡಿಸುವಿಕೆ, ಕ್ಲೋರಿನೇಷನ್ ಮಾಡುವ ಕ್ರಮಗಳ ಬಗ್ಗೆ ಮಾಹಿತಿ ನೀಡಲಾಯಿತು.
ಪ್ರತಿಯೊಂದು ವಸತಿ ನಿಲಯಗಳಲ್ಲಿ ಆಹಾರ ತಯಾರಿಕೆಯಲ್ಲಿ ಹೆಚ್ಚಿನ ಆರೋಗ್ಯ ಕಾಳಜಿ ವಹಿಸುವುದು, ಆಹಾರ ಪದಾರ್ಥಗಳ ಸುರಕ್ಷಿತ ಸಂಗ್ರಹಣೆ, ಘನತ್ಯಾಜ್ಯ, ದ್ರವತ್ಯಾಜಗಳ ಸಮರ್ಪಕ ವಿಲೇವಾರಿ ಮಾಡುವುದು, ಕಾಲಕಾಲಕ್ಕೆ ಅಡುಗೆ ಸಿಬ್ಬಂದಿಯವರ ಆರೋಗ್ಯ ತಪಾಸಣೆ ಮಾಡಿಸುವ ಬಗ್ಗೆ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನವೀನ್‌ಚಂದ್ರ ಕುಲಾಲ್ ಮಾಹಿತಿ ನೀಡಿದರು.