ಬಂಟ್ವಾಳ: ನಿಗೂಢವಾಗಿ ನಾಪತ್ತೆಯಾಗಿದ್ದ ಪಿಯುಸಿ ವಿದ್ಯಾರ್ಥಿ ದಿಗಂತ್ ಪತ್ತೆ

ಬಂಟ್ವಾಳ: ನಿಗೂಢವಾಗಿ ನಾಪತ್ತೆಯಾಗಿದ್ದ ಪಿಯುಸಿ ವಿದ್ಯಾರ್ಥಿ ದಿಗಂತ್ ಪತ್ತೆ
ಬಂಟ್ವಾಳ: ಯಾವುದೇ ಸುಳಿವಿಲ್ಲದೆ ನಿಗೂಢವಾಗಿ ಕಣ್ಮರೆಯಾಗಿದ್ದ ಪರಂಗಿಪೇಟೆಯ ಕಿದೆಬೆಟ್ಟು ನಿವಾಸಿ, ಪಿಯುಸಿ ವಿದ್ಯಾರ್ಥಿ ದಿಗಂತ್ ಸುಮಾರು 10ದಿನಗಳ ಬಳಿಕ ಮಾರ್ಚ್ 8ರಂದು ಶನಿವಾರ ಉಡುಪಿಯಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ.
ಪೊಲೀಸರು ಆತನನ್ನು ಬಂಟ್ವಾಳಕ್ಕೆ ಕರೆ ತರುತ್ತಿದ್ದಾರೆ ಎನ್ನಲಾಗಿದೆ. ಆತ ಸಿಕ್ಕಿರುವ ಬಗ್ಗೆ ಪೊಲೀಸರು ಕುಟುಂಬಸ್ಥರಿಗೆ ತಿಳಿಸಿದ್ದಾರೆ ಎಂದು ಕುಟುಂಬ ಮೂಲದಿಂದ ಮಾಹಿತಿ ಲಭ್ಯವಾಗಿದೆ.
ದಿಗಂತ್ ಮಂಗಳೂರಿನ ಕಾಲೇಜೊಂದರಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ. ಫೆ.25ರ ಮಂಗಳವಾರ ಸಂಜೆ ದೇವಸ್ಥಾನಕ್ಕೆ ಹೋಗುವುದಾಗಿ ಮನೆಯಲ್ಲಿ ತಿಳಿಸಿ ಹೋದವನು ದಿಢೀರ್ ನಾಪತ್ತೆಯಾಗಿದ್ದ. ಹುಡುಕಾಟ ನಡೆಸಿದ ಬಳಿಕ ಆತನ ಚಪ್ಪಲಿಗಳು ಹಾಗೂ ಮೊಬೈಲ್ ಫೋನ್ ಮನೆಯ ಸಮೀಪದ ರೈಲ್ವೇ ಹಳಿಯಲ್ಲಿ ಪತ್ತೆಯಾಗಿತ್ತು. ಆ ಬಳಿಕ ಹುಡುಕಾಟ ನಡೆಸಿದರೂ ಆತನ ನಾಪತ್ತೆಯ ಬಗ್ಗೆ ಯಾವುದೇ ಸುಳಿವು ದೊರಕದೆ ಪೊಲೀಸರಿಗೆ ಈ ಪ್ರಕರಣ ಭಾರೀ ಕಗ್ಗಂಟಾಗಿತ್ತು.
