ಇನ್ಮುಂದೆ ಮದುವೆ ಸಮಾರಂಭದಲ್ಲಿ ಪ್ಲಾಸ್ಟಿಕ್ ಬಾಟಲಿ ನೀರು ಬಳಕೆ ನಿಷೇಧ: ಕೇರಳ ಹೈ ಕೋರ್ಟ್
ಇನ್ಮುಂದೆ ಮದುವೆ ಸಮಾರಂಭದಲ್ಲಿ ಪ್ಲಾಸ್ಟಿಕ್ ಬಾಟಲಿ ನೀರು ಬಳಕೆ ನಿಷೇಧ: ಕೇರಳ ಹೈ ಕೋರ್ಟ್
ತಿರುವನಂತಪುರಂ: ಮದುವೆ ಮನೆಗಳಲ್ಲಿ ಇನ್ಮುಂದೆ ಪ್ಲಾಸ್ಟಿಕ್ ಬಾಟಲಿ ನೀರನ್ನು ಬಳಕೆ ಮಾಡುವಂತಿಲ್ಲ ಎಂದು ಕೇರಳ ಹೈ ಕೋರ್ಟ್ ಆದೇಶಿಸಿದೆ.
ಪರಿಸರದ ಬಗ್ಗೆ ಕಾಳಜಿ ವ್ಯಕ್ತಪಡಿಸಿರುವ ಕೇರಳ ಹೈ ಕೋರ್ಟ್ ರಾಜ್ಯದಲ್ಲಿ ಮದುವೆ ಸಮಾರಂಭದಲ್ಲಿ ನೀರಿನ ಪ್ಲಾಸ್ಟಿಕ್ ಬಾಟಲಿಗಳನ್ನು ಬಳಸಬಾರದು ಎಂದು ಹೇಳಿದೆ. ಸಣ್ಣ ಪ್ಲಾಸ್ಟಿಕ್ ಬಾಟಲಿಗಳು ಹಾನಿಯನ್ನು ಉಂಟುಮಾಡುತ್ತಿವೆ ಎಂದು ನ್ಯಾಯಾಲಯ ಹೇಳಿದೆ ಹಾಗೂ ಯಾವುದೇ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ವಸ್ತುಗಳನ್ನು ಬಳಸಬಾರದು ಮತ್ತು ಮರುಬಳಕೆ ಮಾಡಲಾಗದ ಪ್ಲಾಸ್ಟಿಕ್ ಅನ್ನು ತೊಡೆದುಹಾಕಲು ಕಠಿಣ ಕ್ರಮಗಳು ಅಗತ್ಯ ಎಂದು ನ್ಯಾಯಾಲಯ ಹೇಳಿದೆ.