ಕರಿದ ಹಸಿರು ಬಟಾಣಿಯಲ್ಲೂ ಕ್ಯಾನ್ಸರ್ ಕಾರಕ ರಾಸಾಯನಿಕ ಅಂಶ ಪತ್ತೆ
ಕರಿದ ಹಸಿರು ಬಟಾಣಿಯಲ್ಲೂ ಕ್ಯಾನ್ಸರ್ ಕಾರಕ ರಾಸಾಯನಿಕ ಅಂಶ ಪತ್ತೆ
ಬೆಂಗಳೂರು: ಇಡ್ಲಿ, ಗೋಬಿಮಂಚೂರಿ, ಕಬಾಬ್ ಸೇರಿದಂತೆ ವಿವಿಧ ಆಹಾರ ವಸ್ತುಗಳಲ್ಲಿ ಕ್ಯಾನ್ಸರ್ ಕಾರಕ ರಾಸಾಯನಿಕ ಅಂಶಗಳು ಪತ್ತೆಯಾದ ಬಳಿಕ ಇದೀಗ ಕರಿದ ಹಸಿರು ಬಟಾಣಿಯಲ್ಲೂ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾಗಿರುವುದು ಪ್ರಯೋಗಾಲಯದ ಪರೀಕ್ಷೆಯಲ್ಲಿ ಧೃಡಪಟ್ಟಿದೆ. ಈ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಆಹಾರ ಇಲಾಖೆ ಆಯುಕ್ತ ಶ್ರೀನಿವಾಸ್ ಬಟಾಣಿಗೆ ಕಲರ್ ಬಳಕೆ ಮಾಡುವುದನ್ನು ನಿಷೇಧ ಮಾಡುವಂತೆ ಆದೇಶಿಸಿದ್ದಾರೆ.
ಲ್ಯಾಬ್ ಪ್ರಾಥಮಿಕ ವರದಿಯ ಪ್ರಕಾರ, ಕರಿದ ಬಟಾಣಿಯಲ್ಲಿ ಬ್ರಿಲಿಯಂಟ್ ಬ್ಲೂ ಟೆಟಾರ್ಜಿನ್ ಅಂದರೆ ಹಳದಿ ಬಣ್ಣವಿರುವ ರಾಸಾಯನಿಕ ಇರುವುದು ಪತ್ತೆಯಾಗಿದೆ.