AIIMS ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
AIIMS ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಪಾಟ್ನಾದಲ್ಲಿರುವ ಏಮ್ಸ್ ಗ್ರೂಪ್ ಎ, ಬಿ ಹಾಗೂ ಸಿ ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ.
ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಏಮ್ಸ್ ಪಾಟ್ನಾದ aiimspatna.edu.in ಎಂಬ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ, ಮಾರ್ಚ್ 30ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ಇದೆ.
ಈ ನೇಮಕಾತಿಯ ಮೂಲಕ, ಏಮ್ಸ್ ಪಾಟ್ನಾದಲ್ಲಿ ಒಟ್ಟು 23 ಹುದ್ದೆಗಳನ್ನು ಭರ್ತಿ ಮಾಡುತ್ತದೆ.