ಪುನೀತ್ ರಾಜ್ ಕುಮಾರ್ ಸ್ಮರಣಾರ್ಥ ಭಾರತೀಯ ಅಂಚೆ ಇಲಾಖೆಯಿಂದ ವಿಶೇಷ ಪೋಸ್ಟ್ ಕಾರ್ಡ್ ಬಿಡುಗಡೆ
ಪುನೀತ್ ರಾಜ್ ಕುಮಾರ್ ಸ್ಮರಣಾರ್ಥ ಭಾರತೀಯ ಅಂಚೆ ಇಲಾಖೆಯಿಂದ ವಿಶೇಷ ಪೋಸ್ಟ್ ಕಾರ್ಡ್ ಬಿಡುಗಡೆ
ಬೆಂಗಳೂರು: ಕನ್ನಡ ಚಿತ್ರರಂಗದ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ 50ನೇ ಹುಟ್ಟುಹಬ್ಬದ ಅಂಗವಾಗಿ ಭಾರತೀಯ ಅಂಚೆ ಇಲಾಖೆಯು ವಿಶೇಷ ಗೌರವವನ್ನು ಸಲ್ಲಿಸಿದೆ. ಪುನೀತ್ ಅವರ ಸ್ಮರಣಾರ್ಥ ವಿಶೇಷ ಪೋಸ್ಟ್ ಕಾರ್ಡ್ ಗಳನ್ನು ಬಿಡುಗಡೆ ಮಾಡಿದೆ.
ಬೆಂಗಳೂರಿನಲ್ಲಿ ನಡೆದ ಸರಳ ಸಮಾರಂಭದಲ್ಲಿ ಪುನೀತ್ ರಾಜ್ ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ಪೋಸ್ಟ್ ಕಾರ್ಡ್ ಗಳನ್ನು ಬಿಡುಗಡೆ ಮಾಡಿದರು.
ಈ ಪೋಸ್ಟ್ ಕಾರ್ಡ್ ಗಳಲ್ಲಿ ಪುನೀತ್ ಅವರ ವಿವಿಧ ಭಾವಚಿತ್ರಗಳನ್ನು ಮುದ್ರಿಸಲಾಗಿದ್ದು, ಅವರ ಅಭಿಮಾನಿಗಳಿಗೆ ಇದು ವಿಶೇಷ ಕೊಡುಗೆಯಾಗಿದೆ.