ಪೊಲೀಸರು ಸ್ವಂತ ವಾಹನದ ಮೇಲೆ ಪೊಲೀಸ್ ಎಂದು ಬರೆಸುವಂತಿಲ್ಲ: ಗೃಹ ಸಚಿವ
ಪೊಲೀಸರು ಸ್ವಂತ ವಾಹನದ ಮೇಲೆ ಪೊಲೀಸ್ ಎಂದು ಬರೆಸುವಂತಿಲ್ಲ: ಗೃಹ ಸಚಿವ
ಬೆಂಗಳೂರು: ಪೊಲೀಸ್ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್ ಎಂದು ಬರೆಸುವಂತಿಲ್ಲ, ಒಂದು ವೇಳೆ ಬರೆಸಿದರೆ ಅದು ಕಾನೂನು ಉಲ್ಲಂಘಿಸಿದಂತೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಇಂತಹ ಕ್ರಮ ಕಾನೂನು ಉಲ್ಲಂಘನೆ ಆಗುತ್ತದೆ ಮತ್ತು 2022ರ ಸರಕಾರದ ಸುತ್ತೋಲೆಯ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ. ಈ ವಿಷಯ ಶ್ರವಣಬೆಳಗೊಳ ಶಾಸಕರ ಪ್ರಶ್ನೆಗೆ ಲಿಖಿತ ಉತ್ತರವಾಗಿ ನೀಡಲಾಗಿದೆ.