ಮುಜರಾಯಿ ಇಲಾಖೆಯಿಂದ ಸಿಹಿ ಸುದ್ದಿ
ಮುಜರಾಯಿ ಇಲಾಖೆಯಿಂದ ಸಿಹಿ ಸುದ್ದಿ
ಬೆಂಗಳೂರು: ರಾಜ್ಯ ಮತ್ತು ಬೇರೆ ರಾಜ್ಯಗಳ ದೇವಾಲಯಕ್ಕೆ ತೆರಳುವವರಿಗೆ ಮುಜರಾಯಿ ಇಲಾಖೆ ಸಿಹಿ ಸುದ್ದಿ ನೀಡಿದೆ, ಇನ್ನು ಮುಂದೆ ದೇಗುಲದ ರೂಮ್ ಗಳ ಮಾಹಿತಿ ವೆಬ್ಸೈಟ್ನಲ್ಲಿ ಲಭ್ಯವಾಗಲಿದೆ.
ಈ ಬಾರಿಯ ಕರ್ನಾಟಕ ಬಜೆಟ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿವಿಧ ಕ್ಷೇತ್ರಗಳಿಗೆ ಹಣ ಮಂಜೂರು ಮಾಡಿದ್ದಾರೆ. ಅದರಂತೆ ಮುಜರಾಯಿ ಹಾಗೂ ಧಾರ್ಮಿಕ ದತ್ತಿ ಇಲಾಖೆಗೆ ಸಂಬಂಧಿಸಿದಂತೆ ಹೊಸ ಯೋಜನೆಗಳನ್ನು ಘೋಷಿಸಿದೆ. ಅದರಲ್ಲಿ ರಾಜ್ಯದ ಭಕ್ತಾದಿಗಳಿಗೆ ಅನುಕೂಲವಾಗುವಂತೆ ಕರ್ನಾಟಕ ದೇವಾಲಯಗಳ ವಸತಿ ಕೋಶವನ್ನು ನೀಡಲು ಧಾರ್ಮಿಕ ದತ್ತಿ ಇಲಾಖೆ ಮುಂದಾಗಿದೆ.