• 8 ಸೆಪ್ಟೆಂಬರ್ 2024

ದ್ವಿತೀಯ ಪಿಯುಸಿ ಫಲಿತಾಂಶ : ರಿಸಲ್ಟ್ ಚೆಕ್ ಮಾಡುವ ಮಾಹಿತಿ

 ದ್ವಿತೀಯ ಪಿಯುಸಿ ಫಲಿತಾಂಶ : ರಿಸಲ್ಟ್ ಚೆಕ್ ಮಾಡುವ ಮಾಹಿತಿ
Digiqole Ad

Karnataka 2nd PUC Result (ದ್ವಿತೀಯ ಪಿಯುಸಿ) 2023:
ದ್ವಿತೀಯ ಪಿಯುಸಿ ಫಲಿತಾಂಶ2022-23ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ (PUC Examination Results) ವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ತನ್ನ ಅಧಿಕೃತ ವೆಬ್‌ಸೈಟ್‌ www.karresults.nic.in ನಲ್ಲಿ ದಿನಾಂಕ 21.04.2023ರ ಬೆಳಗ್ಗೆ 10.00 ಗಂಟೆಯ ನಂತರ ಬಿಡುಗಡೆ ಮಾಡಲಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಸಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು, ಇಂದು ಬೆಳಗ್ಗೆ 10 ಗಂಟೆಗೆ ಮಂಡಳಿಯ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ನಡೆಸಲಿದ್ದು, ದ್ವಿತೀಯ ಪಿಯುಸಿ ಫಲಿತಾಂಶ ಕುರಿತು ಸಂಪೂರ್ಣ ಮಾಹಿತಿಯನ್ನು ನೀಡಲಿದೆ.

ಮಾರ್ಚ್ 2023ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ದಿನಾಂಕ 09-03-2023 ರಿಂದ 29-03-2023ರವರೆಗೆ ನಡೆಸಲಾಗಿತ್ತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದ್ದು, ಫಲಿತಾಂಶವು 21.04.2023ರಂದು ಪ್ರಕಟವಾಗಲಿದೆ. ಈ ಬಾರಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ರಾಜ್ಯದ್ಯಾಂತ ಒಟ್ಟು 7.26 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು.

Karnataka 2nd PUC Marks Card: 2nd ಪಿಯು ಮಾರ್ಕ್ಸ್‌ ಕಾರ್ಡ್‌ ಪಡೆಯುವುದು ಹಾಗೂ ದ್ವಿತೀಯ ಪಿಯುಸಿ ಫಲಿತಾಂಶ ಚೆಕ್ ಮಾಡುವುದು ಹೇಗೆ?

  • ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ www.karresults.nic.in ಅಥವಾ https://kseab.karnataka.gov.in/ ಗೆ ಭೇಟಿ ನೀಡಿ.
  • 2nd ಪಿಯುಸಿ ಫಲಿತಾಂಶಕ್ಕೆ ಸಂಬಂಧಸಿದ ಲಿಂಕ್‌ ಮೇಲೆ ಕ್ಲಿಕ್‌ ಮಾಡಿ.
  • ಆ ಓಪನ್‌ ಆದ ಪೇಜ್‌ನಲ್ಲಿ ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್‌ ನಂಬರ್‌ ಟೈಪ್‌ ಮಾಡಿ, ‘Submit’ ಕ್ಲಿಕ್ ಮಾಡಿ.
  • ಆಗ ನಿಮಗೆ ನಿಮ್ಮ ಫಲಿತಾಂಶ ಪ್ರದರ್ಶನವಾಗುತ್ತದೆ.
  • ಅದನ್ನು ಡೌನ್‌ಲೋಡ್‌ ಮಾಡಿಕೊಂಡು, ಪ್ರಿಂಟ್‌ ತೆಗೆದುಕೊಳ್ಳಿ.

ಈ ಬಾರಿ ಸದ್ಯ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಶಿಕ್ಷಣ ಸಚಿವರ ಬದಲಾಗಿ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧಿಕಾರಿಗಳು ಫಲಿತಾಂಶ ಪ್ರಕಟ ಮಾಡಲಿದ್ದಾರೆ.

Digiqole Ad

NEWS TEAM

ಈ ಸುದ್ದಿಗಳನ್ನೂ ಓದಿ