• 8 ಸೆಪ್ಟೆಂಬರ್ 2024

ಪುರಿ – ಹೌರ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

 ಪುರಿ – ಹೌರ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ
Digiqole Ad

ಪುರಿ ಮತ್ತು ಹೌರಾ ನಡುವೆ ಓಡುವ ಒಡಿಶಾದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಗುರುವಾರ ಚಾಲನೆ ನೀಡಿದರು. ಪ್ರಧಾನಮಂತ್ರಿ ಕಾರ್ಯಾಲಯದ (PMO) ಅಧಿಕೃತ ಪ್ರಕಟಣೆಯ ಪ್ರಕಾರ, ರೈಲು ಒಡಿಶಾದ ಖೋರ್ಧಾ, ಕಟಕ್, ಜಾಜ್‌ಪುರ್, ಭದ್ರಕ್, ಬಾಲಸೋರ್ ಜಿಲ್ಲೆಗಳು ಮತ್ತು ಪಶ್ಚಿಮ ಬಂಗಾಳದ ಪಶ್ಚಿಮ್ ಮೆದಿನಿಪುರ್, ಪುರ್ಬಾ ಮೇದಿನಿಪುರ್ ಜಿಲ್ಲೆಗಳ ಮೂಲಕ ಹಾದುಹೋಗುತ್ತದೆ. ರೈಲು ಬಳಕೆದಾರರಿಗೆ ವೇಗದ, ಆರಾಮದಾಯಕ ಮತ್ತು ಅನುಕೂಲಕರ ಪ್ರಯಾಣದ ಅನುಭವವನ್ನು ನೀಡುತ್ತದೆ, ಮತ್ತು ಈ ಪ್ರದೇಶದಲ್ಲಿ ಆರ್ಥಿಕ ಅಭಿವೃದ್ಧಿಯನ್ನು ಮಾಡುತ್ತಿದೆ ಎಂದು ಪ್ರಕಟಣೆ ತಿಳಿಸಿದೆ. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಭಾರತ ಸ್ವಂತವಾಗಿ ವಂದೇ ಭಾರತ್ ರೈಲುಗಳನ್ನು ತಯಾರಿಸಿದೆ ಹಾಗೂ 5G ಮತ್ತು ಇತರ ತಂತ್ರಜ್ಞಾನಗಳನ್ನು ಸ್ವಂತವಾಗಿ ತಯಾರಿಸುತ್ತಿದೆ ಇದೂ ನಮ್ಮ ಭಾರತ ಹೆಗ್ಗಳಿಕೆಯ ವಿಷಯ ಎಂದು ಶುಭ ನುಡಿದರು.

 

Digiqole Ad

NEWS TEAM

ಈ ಸುದ್ದಿಗಳನ್ನೂ ಓದಿ