ಕರ್ನಾಟಕದಲ್ಲಿ ಭಾರೀ ಮಳೆ,ಸಾಧ್ಯತೆ
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ವರುಣ ಅಬ್ಬರಿಸಲಿದ್ದಾನೆ. ಬೆಂಗಳೂರಿನಲ್ಲಿ ಮಧ್ಯಾಹ್ನದ ಬಳಿಕ ಮೋಡಕವಿದ ವಾತಾವರಣವಿರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ, ಮಂಡ್ಯದಲ್ಲೂ ಮಳೆಯಾಗಲಿದೆ. ಎಂದು ತಿಳಿಸಿದೆ.