ಬೆಂಗಳೂರಿನಲ್ಲಿ ಭಾರಿ ಮಳೆ – ಕಾರಿನಡಿಯಲ್ಲಿ ಸಿಲುಕಿ ಯುವತಿ ಸಾವು
ಬೆಂಗಳೂರಿನಲ್ಲಿ ಇಂದು ಭಾರೀ ಮಳೆ ಆರಂಭವಾಗಿದೆ. ಹಲವೆಡೆ ಮರಗಳು ಉರುಳಿದ್ದು, ರಸ್ತೆಗಳು ಜಲಾವೃತವಾಗಿವೆ. ವಾರಾಂತ್ಯದ ಕಾರಣ ಅಧಿಕ ಸಂಖ್ಯೆಯ ವಾಹನಗಳು ರಸ್ತೆಗಿಳಿದಿದ್ದು, ಸವಾರರು ಪರದಾಡುವಂತಾಗಿದೆ. ಗುಡುಗು-ಸಿಡಿಲಿನ ಆರ್ಭಟಕ್ಕೆ ಜನ ತತ್ತರಿಸಿದ್ದಾರೆ.ಈ ಸಂದರ್ಬದಲ್ಲಿ , ಕೆಆರ್ ಸರ್ಕಲ್ ಅಂಡರ್‌ಪಾಸ್‌ನಲ್ಲಿ ಮಳೆ ನೀರಿನಲ್ಲಿ ಕಾರು ಸಿಲುಕಿಕೊಂಡಿದೆ. ಒಂದೇ ಕುಟುಂಬದ 6 ಮಂದಿ ಕಾರಿನಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ. ನಾಲ್ವರನ್ನು ರಕ್ಷಣಾ ಸಿಬ್ಬಂದಿ ರಕ್ಷಿಸಿದ್ದು, ಆ ಕಾರಿನಲ್ಲಿ ಸಿಲುಕಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನು ಸೇಂಟ್ ಮಾರ್ಥಾಸ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ ಅಲ್ಲಿ ಚಿಕಿತ್ಸೆಗೆ ನಿರಾಕರಿಸಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಇದೀಗ ಬಂದ ಮಾಹಿತಿಯಂತೆ ಯುವತಿ ಮೃತಪಟ್ಟಿದ್ದಾರೆ. ಆಸ್ಪತ್ರೆ ಬಳಿ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಕಾರಿನಲ್ಲಿ ಮಗು ಸಿಲುಕಿರುವ ಸಾಧ್ಯತೆಯಿದ್ದು, ಶೋಧ ಮುಂದುವರೆದಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ..